ತುಮಕೂರು: ಕೊರೊನಾ ಸೋಂಕಿನಿಂದ ಜಿಲ್ಲೆಯಲ್ಲಿ ಪತ್ರಕರ್ತರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಸುಮಾರು 38 ವರ್ಷದ ಜಯಣ್ಣ ಎಂಬುವವರು ಅನೇಕ ದಿನಗಳಿಂದ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದು, ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇವರು ಗುಬ್ಬಿ ತಾಲೂಕಿನ ಪ್ರಜಾವಾಣಿ ಪತ್ರಿಕೆಯಲ್ಲಿ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು.