ETV Bharat / state

ಚಿರತೆ ಸೆರೆ ಹಿಡಿಯುವಂತೆ ಆಗ್ರಹ... ತುಮಕೂರಿನಲ್ಲಿ ಕರವೇ ಪ್ರತಿಭಟನೆ - Karave protest in Tumkur demanding capture of leopard

ಚಿರತೆಗಳ ಹಾವಳಿ ಹೆಚ್ಚಾಗಿದ್ದು ಅರಣ್ಯಾಧಿಕಾರಿಗಳು ಸೆರೆ ಹಿಡಿಯುವಲ್ಲಿ ವಿಫಲರಾಗಿದ್ದಾರೆಂದು ಆರೋಪಿಸಿ, ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

kannada rakshana vedike protest
ತುಮಕೂರಿನಲ್ಲಿ ಕರವೇ ಪ್ರತಿಭಟನೆ
author img

By

Published : Jan 13, 2020, 5:26 PM IST

ತುಮಕೂರು: ಜಿಲ್ಲೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು ಅರಣ್ಯಾಧಿಕಾರಿಗಳು ಸೆರೆ ಹಿಡಿಯುವಲ್ಲಿ ವಿಫಲರಾಗಿದ್ದಾರೆಂದು ಆರೋಪಿಸಿ, ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ತುಮಕೂರು ಗ್ರಾಮಾಂತರ, ಗುಬ್ಬಿ, ಕುಣಿಗಲ್ ತಾಲೂಕುಗಳಲ್ಲಿ ಚಿರತೆ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಲ್ಲಿಯವರೆಗೂ ಮೂರು ಜನರು ಚಿರತೆ ದಾಳಿಯಿಂದ ಸಾವನ್ನಪ್ಪಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಇಲ್ಲಿಯವರೆಗೂ ಚಿರತೆಯನ್ನು ಸೆರೆ ಹಿಡಿಯುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ತುಮಕೂರಿನಲ್ಲಿ ಕರವೇ ಪ್ರತಿಭಟನೆ

ಅಲ್ಲಿನ ಗ್ರಾಮಸ್ಥರು ಓಡಾಡಲು, ಹೊಲಗಳಲ್ಲಿ ಕೆಲಸ ನಿರ್ವಹಿಸಲು ಹಿಂಜರಿಯುವಂತಹ ಪರಿಸ್ಥಿತಿ ಉಂಟಾಗಿದ್ದು, ಕೂಡಲೇ ಚಿರತೆಗಳನ್ನು ಸೆರೆ ಹಿಡಿಯುವಂತೆ ಜಿಲ್ಲಾಧಿಕಾರಿಗಳು ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ಒತ್ತಾಯಿಸಿದರು.

ಈ ವೇಳೆ ಕರವೇ ಜಿಲ್ಲಾಧ್ಯಕ್ಷ ಮಂಜುನಾಥ ಗೌಡ ಮಾತನಾಡಿ, ಗುಬ್ಬಿ ತಾಲೂಕಿನ ಸಿ.ಎಸ್. ಪುರ ಹೋಬಳಿಯಲ್ಲಿ ಹಾಗೂ ಕುಣಿಗಲ್ ತಾಲೂಕಿನಲ್ಲಿ ಚಿರತೆಯ ಹಾವಳಿ ಹೆಚ್ಚಾಗಿದೆ. ಇನ್ನಾದರು ಅರಣ್ಯ ಇಲಾಖೆ ಸಿಬ್ಬಂದಿ ಎಚ್ಚೆತ್ತುಕೊಂಡು ಚಿರತೆಗಳನ್ನು ಸೆರೆ ಹಿಡಿಯುವ ಮೂಲಕ ಗ್ರಾಮಸ್ಥರು ಭಯವಿಲ್ಲದೆ ಓಡಾಡಲು ಅನುವು ಮಾಡಿಕೊಡಬೇಕು ಎಂದು ಹೇಳಿದರು.

Intro:ತುಮಕೂರು: ಜಿಲ್ಲೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಅರಣ್ಯಾಧಿಕಾರಿಗಳು ಬಂಧಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿ, ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

Body:ತುಮಕೂರು ಗ್ರಾಮಾಂತರ, ಗುಬ್ಬಿ, ಕುಣಿಗಲ್ ತಾಲ್ಲೂಕುಗಳಲ್ಲಿ ಚಿರತೆ ಹಾವಳಿ ಹೆಚ್ಚಾಗುತ್ತಿದೆ. ಇಲ್ಲಿಯವರೆಗೂ 3 ಜನರು ಚಿರತೆಯಿಂದ ಸಾವನ್ನಪ್ಪಿದ್ದು, ಅಲ್ಲಿನ ಗ್ರಾಮಸ್ಥರು ಓಡಾಡಲು, ಹೊಲಗಳಲ್ಲಿ ಕೆಲಸ ನಿರ್ವಹಿಸಲು ಹಿಂಜರಿಯುವಂತಹ ಪರಿಸ್ಥಿತಿ ಉಂಟಾಗಿದೆ. ಅರಣ್ಯ ಇಲಾಖೆ ಇಲ್ಲಿಯವರೆಗೂ ಚಿರತೆಯನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ. ಹಾಗಾಗಿ ಜಿಲ್ಲಾಧಿಕಾರಿಗಳು ಅರಣ್ಯಾಧಿಕಾರಿಗಳಿಗೆ ಶೀಘ್ರವಾಗಿ ಚಿರತೆಗಳನ್ನು ಬಂಧಿಸುವಂತೆ ಒತ್ತಾಯಿಸಬೇಕು ಎಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಮಂಜುನಾಥಗೌಡ, ಗುಬ್ಬಿ ತಾಲೂಕಿನ ಸಿಎಸ್ ಪುರ ಹೋಬಳಿಯಲ್ಲಿ ಹಾಗೂ ಕುಣಿಗಲ್ ತಾಲೂಕಿನಲ್ಲಿ ಚಿರತೆಯ ಹಾವಳಿ ಹೆಚ್ಚಾಗಿದ್ದು, ಅರಣ್ಯ ಇಲಾಖೆ ಚಿರತೆಗಳನ್ನು ಸೆರೆಹಿಡಿಯುವಲ್ಲಿ ವಿಫಲವಾಗಿದೆ. ಇನ್ನಾದರೂ ಅರಣ್ಯ ಇಲಾಖೆ ಸಿಬ್ಬಂದಿಗಳು ಎಚ್ಚೆತ್ತುಕೊಂಡು ಚಿರತೆಗಳನ್ನು ಸೆರೆಹಿಡಿಯುವ ಮೂಲಕ ಗ್ರಾಮಸ್ಥರು ಭಯವಿಲ್ಲದೆ ಓಡಾಡಲು ಅನುವು ಮಾಡಿಕೊಡಬೇಕು. ಅದಕ್ಕೆ ಜಿಲ್ಲಾಧಿಕಾರಿಗಳು ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಸೂಚನೆ ನೀಡಬೇಕು ಎಂದು ಒತ್ತಾಯಿಸಲು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.
ಬೈಟ್: ಮಂಜುನಾಥ್ ಗೌಡ, ಜಿಲ್ಲಾಧ್ಯಕ್ಷ, ಕರ್ನಾಟಕ ರಕ್ಷಣಾ ವೇದಿಕೆ

Conclusion:ವರದಿ
ಸುಧಾಕರ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.