ತುಮಕೂರು : ಕೇಂದ್ರ ಸರ್ಕಾರ ಕೃಷಿಗೆ ಸಂಬಂಧಿಸಿದ ಮೂರು ಮಸೂದೆಗಳಿಗೆ ಅಂಗೀಕಾರ ನೀಡಿದೆ. ಕೇಂದ್ರ ಸರ್ಕಾರದ ಈ ನೀತಿ ವಿರೋಧಿಸಿ ಮತ್ತು ರಾಜ್ಯ ಸರ್ಕಾರದ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಖಾಸಗೀಕರಣ ಕಾಯ್ದೆ ಸೇರಿ ಎಲ್ಲಾ ರೀತಿಯ ರೈತ ವಿರೋಧಿ ಕಾಯ್ದೆಗಳನ್ನು ಅಂಗೀಕಾರ ಪಡೆಯಬಾರದೆಂದು ಇದೇ ತಿಂಗಳ 28ರಂದು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ವತಿಯಿಂದ ಕರ್ನಾಟಕ ಬಂದ್ ಘೋಷಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆಗಳಿಗೆ ಅಂಗೀಕಾರ ನೀಡಿದೆ. ಅದೇ ರೀತಿ ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆಯ ಮೂಲಕ ತಿದ್ದುಪಡಿ ತಂದು ಅಧಿವೇಶನದಲ್ಲಿ ಅಂಗೀಕಾರ ಪಡೆಯಲು ಪ್ರಯತ್ನಿಸುತ್ತಿದೆ. ಇದನ್ನು ವಿರೋಧಿಸಿ ಕರ್ನಾಟಕದ ಎಲ್ಲಾ ರೈತ ಹಾಗೂ ಪ್ರಗತಿಪರ ಸಂಘಟನೆಗಳು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ ಮೂರು ದಿನಗಳಿಂದ ನಿರಂತರ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಜನಪರ ಚಳವಳಿ ನಡೆಸುತ್ತಿದ್ದಾರೆ ಎಂದರು.
ಕೇಂದ್ರ ಸರ್ಕಾರ ಕೃಷಿಗೆ ಸಂಬಂಧಿಸಿದ ಮೂರು ಮಸೂದೆಗಳಿಗೆ ಅಂಗೀಕಾರ ನೀಡಿದೆ. ಕೇಂದ್ರ ಸರ್ಕಾರದ ಈ ನೀತಿ ವಿರೋಧಿಸಿ ಮತ್ತು ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಖಾಸಗೀಕರಣ ಕಾಯ್ದೆ ಸೇರಿ ಎಲ್ಲಾ ರೀತಿಯ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ಅಂಗೀಕಾರ ಪಡೆಯಬಾರದೆಂದು ಇದೇ ತಿಂಗಳ 28ರಂದು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯ ವತಿಯಿಂದ ಕರ್ನಾಟಕ ಬಂದ್ ಘೋಷಿಸಲಾಗಿದೆ. ಈ ಬಂದ್ಗೆ ಸುಮಾರು 32 ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ ಎಂದು ತಿಳಿಸಿದರು.
ಹಸಿರು ಸೇನೆ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ಮಾತನಾಡಿ, ಸರ್ಕಾರ ರೈತರಿಗೆ ಮರಣ ಶಾಸನ ಬರೆಯಲು ಹೊರಟಿದೆ. ರೈತ ವಿರೋಧಿ ಮಸೂದೆಗಳ ವಿರುದ್ಧ ಹೋರಾಡುವವರನ್ನು ಭಯೋತ್ಪಾದಕರಂತೆ ಬಿಂಬಿಸುವ ಕಾರ್ಯವನ್ನು ಸರ್ಕಾರ ಮಾಡುತ್ತಿದೆ. ಜನಪ್ರತಿನಿಧಿಗಳು ಹಾಗೂ ಅವರ ಬೆಂಬಲಿಗರು ಹೋರಾಟಗಾರರ ವಿರುದ್ಧ ಇಲ್ಲಸಲ್ಲದ ಹೇಳಿಕೆ ನೀಡುವ ಪ್ರವೃತ್ತಿ ಬೆಳಸಿಕೊಳ್ಳುತ್ತಿದ್ದಾರೆ.
ಈ ಕಾರ್ಯ ಮುಂದುವರೆಯಬಾರದು ಎಂದರು. ರೈತ ವಿರೋಧಿ ಕಾಯ್ದೆಗಳನ್ನು ಯಾವುದೇ ರೀತಿಯ ಚರ್ಚೆ ನಡೆಸದೆ, ಸುಗ್ರೀವಾಜ್ಞೆಯ ಮೂಲಕ ಸರ್ವಾಧಿಕಾರವನ್ನು ಮಾಡುತ್ತಿರುವ ಅಂತವರನ್ನು ಏನೆಂದು ಕರೆಯಬೇಕು ಎಂದು ಪ್ರಶ್ನಿಸಿದರು.