ತುಮಕೂರು: ಶಿರಾ ಉಪ ಚುನಾವಣೆಯಲ್ಲಿ ಪ್ರಚಾರದ ಕಾವು ಒಂದೆಡೆ ರಂಗೇರುತ್ತಿದ್ದರೆ, ಇನ್ನೊಂದೆಡೆ ರಾಜಕೀಯ ರಣತಂತ್ರಗಳಿಗೆ ವೇದಿಕೆಯಾಗಿ ಪರಿವರ್ತನೆಯಾಗುತ್ತಿದೆ.
ಇದಕ್ಕೆ ಸಾಕ್ಷಿ ಎಂಬಂತೆ ಬಿಜೆಪಿ ಮುಖಂಡರು ಕ್ಷೇತ್ರದ ತುಂಬೆಲ್ಲಾ ಓಡಾಡುತ್ತಾ ಪ್ರಚಾರದಲ್ಲಿ ತೊಡಗಿದ್ದಾರೆ. ಸ್ಪಟಿಕಪುರಿ ಪಟ್ಟನಾಯಕನಹಳ್ಳಿಯ ನಂಜಾವಧೂತ ಸ್ವಾಮೀಜಿಯವರನ್ನು ಮಾಜಿ ಸಚಿವ, ಬಿಜೆಪಿ ಮುಖಂಡ ಕಟ್ಟಾ ಸುಬ್ರಹ್ಮಣ್ಯನಾಯ್ಡು ಭೇಟಿಯಾಗಿ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್ ಗೌಡ ಕೂಡ ಹಾಜರಿದ್ದರು.