ತುಮಕೂರು: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕುಳಿತು ಮಾಜಿ ಶಾಸಕ ರಾಜಣ್ಣ, ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ವಿರುದ್ಧ ಅಶ್ಲೀಲ ಪದಗಳನ್ನು ಬಳಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ.
ರಾಜಣ್ಣ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕುಳಿತು ಹೀಗೆ ಮಾತನಾಡುತ್ತಿದ್ದುದ್ದನ್ನ ಕಂಡು ಸ್ಥಳದಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ತಬ್ಬಿಬ್ಬಾಗಿದ್ದಾರೆ. ನನ್ನ ವಿರುದ್ಧ ಪ್ರತಿಭಟನೆ ಮಾಡುವವರ ನಾಲಿಗೆ ಸೀಳಿ ಬಿಡುತ್ತೇನೆ ಎಂದು ರಾಜಣ್ಣ ಆಕ್ರೋಶ ವ್ಯಕ್ತಪಡಿಸಿರುವುದು ಕೂಡ ವಿಡಿಯೋದಲ್ಲಿ ಸೆರೆಯಾಗಿದೆ.