ತುಮಕೂರು: ಜಿಲ್ಲೆಯಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ನಡೆಯುವ ಕೋವಿಡ್-19 ಲಸಿಕಾ ಉತ್ಸವಕ್ಕೆ ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಡಿಸಿ, 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಉದ್ದೇಶ ಹೊಂದಲಾಗಿದೆ. ಅಲ್ಲದೆ ಇಲ್ಲಿಯ ಲಸಿಕೆ ಪಡೆಯುವುದರಿಂದ ಯಾವುದೇ ರೀತಿಯಲ್ಲಿ ಆರೋಗ್ಯದ ಮೇಲೆ ಪರಿಣಾಮಗಳು ಬೀರುವುದಿಲ್ಲ ಎಂದು ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಕೊರೊನಾ ಸೋಂಕು ಹರಡುವುದನ್ನು ಲಸಿಕೆ ಪಡೆದುಕೊಂಡು ತಡೆಗಟ್ಟಬಹುದು.
ಜಿಲ್ಲೆಯಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆ ಈಗಾಗಲೇ ಹೊರಡಿಸಲಾಗಿದ್ದ ಕೊರೊನಾ ಕರ್ಫ್ಯೂ ಮಾರ್ಪಡಿಸಲಾಗಿದೆ. ಮಹಾನಗರ ಪಾಲಿಕೆ ವ್ಯಾಪ್ತಿಗೆ ಮಾತ್ರ ಸೀಮಿತವಾಗುವಂತೆ ರಾತ್ರಿ ಕರ್ಫ್ಯೂ ತಿದ್ದುಪಡಿ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಡಿಸಿ ಹೇಳಿದ್ದಾರೆ.