ತುಮಕೂರು: ತೈಲ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರ ಜನರ ಪಿಕ್ ಪಾಕೆಟ್ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ಜಿಲ್ಲೆಯ ಶಿರಾ ಪಟ್ಟಣದಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ ಡಿ.ಕೆ.ಶಿವಕುಮಾರ್, ಜನರ ಜೇಬಿನಿಂದ ಕಳ್ಳತನ ಮಾಡಿರುವ ಹಣವನ್ನು ಜನರಿಗೆ ವಾಪಸ್ ಕೊಡಬೇಕು ಎಂದು ಆಗ್ರಹಿಸಿದರು.
ಬೆಲೆ ಏರಿಕೆಯನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿ ನಿರಂತರವಾಗಿ ತಾಲೂಕುಮಟ್ಟ, ಹೋಬಳಿ ಹಾಗೂ ಗ್ರಾಮ ಮಟ್ಟದಲ್ಲಿಯೂ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಡಿ.ಕೆ.ಶಿವಕುಮಾರ್ ಅವರೊಂದಿಗೆ ಮಾಜಿ ಸಚಿವ ಟಿ.ಬಿ.ಜಯಚಂದ್ರ, ಮಾಜಿ ಸಂಸದ ಚಂದ್ರಪ್ಪ ಉಪಸ್ಥಿತರಿದ್ದರು.