ETV Bharat / state

ತೈಲ ಬೆಲೆ ಏರಿಕೆ ಖಂಡಿಸಿ ರಾಜ್ಯದ 900 ಕಡೆ ಪ್ರತಿಭಟನೆ: ಡಿ.ಕೆ ಶಿವಕುಮಾರ್​

author img

By

Published : Jun 13, 2021, 1:55 PM IST

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್​ ರಾಜ್ಯಾದ್ಯಂತ '100 Not Out' ಎಂಬ ಪ್ರತಿಭಟನೆ ನಡೆಸುತ್ತಿದ್ದು, ಇಂದು ತಿಪಟೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪಾಲ್ಗೊಂಡರು.

Congress protest at Thumkur
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

ತುಮಕೂರು: ತೈಲ ಬೆಲೆ ಏರಿಕೆಯಾದಂತೆ ಸಹಜವಾಗಿ ದಿನ ಬಳಕೆ ವಸ್ತುಗಳ ಬೆಲೆ ಕೂಡ ಹೆಚ್ಚಳವಾಗುತ್ತಿದೆ. ಆದರೆ, ಜನರ ಆದಾಯದಲ್ಲಿ ಹೆಚ್ಚಳವಾಗದೆ ತೀವ್ರ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು. ತುಮಕೂರಿನಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಅವರು ಮಾತನಾಡಿದರು.

ಪ್ರತಿ ಲೀಟರ್​ಗೆ 63 ರೂ. ಇದ್ದ ಪೆಟ್ರೋಲ್ ಬೆಲೆ ನಿರಂತರವಾಗಿ ಏರಿಕೆಯಾಗಿ 100 ರೂ. ತಲುಪಿದೆ. ಇಂಧನ ಬೆಲೆ ಹೆಚ್ಚಳ ಖಂಡಿಸಿ ಕಾಂಗ್ರೆಸ್ ವತಿಯಿಂದ ರಾಜ್ಯದ 900 ಜಿಲ್ಲಾ ಪಂಚಾಯತ್​ ಕ್ಷೇತ್ರಗಳಲ್ಲಿ ಏಕಕಾಲಕ್ಕೆ ಪ್ರತಿಭಟನೆ ನಡೆಯುತ್ತಿದೆ. ನಾಳೆ ಗ್ರಾಮ ಪಂಚಾಯತ್​ ಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

ಖಾಸಗಿ, ಸರ್ಕಾರಿ ನೌಕರರ ವೇತನ ಹೆಚ್ಚಳವಾಗಿಲ್ಲ. ಅಲ್ಲದೆ, ನರೇಗಾ ಕೂಲಿ ಬೆಲೆ ಕೂಡ ಹೆಚ್ಚಳವಾಗಿಲ್ಲ. ಜನರನ್ನು ಲೂಟಿ ಮಾಡುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ನಾವೆಲ್ಲ ಪ್ರತಿಭಟಿಸುತ್ತಿದ್ದೇವೆ. ಇದು ಕಾಂಗ್ರೆಸ್​​​ಗೆ ಮಾತ್ರ ಸೀಮಿತವಾದ ಕಾರ್ಯಕ್ರಮವಲ್ಲ ಎಂದು ಹೇಳಿದರು.

ಇದನ್ನೂ ಓದಿ: ತಂದೆಯ ಧ್ವನಿ ಅಡಗಿಸಲು‌ ನನ್ನ ವಿರುದ್ಧ ಆರೋಪ: ವಿಶ್ವನಾಥ್ ಪುತ್ರ ಅಮಿತ್ ದೇವರಹಟ್ಟಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.