ETV Bharat / state

ಆಗ್ನೇಯ ಪದವೀಧರ ಕ್ಷೇತ್ರ: 'ಕೈ' ಅಭ್ಯರ್ಥಿಗೆ ಮತ ಹಾಕುವಂತೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಮನವಿ - KPCC state spokesman Laxman

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಆರನೇ ವೇತನ ಆಯೋಗದ ಶಿಫಾರಸಿನಂತೆ ಶೇ. 30ರಷ್ಟು ವೇತನವನ್ನು ಹೆಚ್ಚಳ ಮಾಡಿದರು. ಇದರಿಂದ ಒಬ್ಬ ಸರ್ಕಾರಿ ನೌಕರರಿಗೆ ಮಾಸಿಕ 30ರಿಂದ 60 ಸಾವಿರದವರೆಗೆ ವೇತನ ಹೆಚ್ಚಳವಾಯಿತು. ಇದನ್ನು ಮತದಾರರು ಮರೆಯಬಾರದು ಎಂದು ಲಕ್ಷ್ಮಣ್ ಮತದಾರರಲ್ಲಿ ಮನವಿ ಮಾಡಿದರು.

kpcc-state-spokesman-laxman-talk-about-graduate-field-election
ಆಗ್ನೇಯ ಪದವೀಧರ ಕ್ಷೇತ್ರದ 'ಕೈ' ಅಭ್ಯರ್ಥಿಗೆ ಮತ ಹಾಕುವಂತೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಮನವಿ
author img

By

Published : Oct 13, 2020, 7:33 PM IST

ತುಮಕೂರು: ವಿದ್ಯಾವಂತ ಸಮುದಾಯ ಆಮಿಷಗಳಿಗೆ ಬಲಿಯಾಗಿ ಮತ ಚಲಾಯಿಸುತ್ತಿದ್ದಾರೆ ಎಂಬ ಆರೋಪ ಶಿಕ್ಷಕರು ಮತ್ತು ಪದವೀಧರರ ಕ್ಷೇತ್ರಗಳ ಮತದಾರರ ಮೇಲಿದೆ. ಇದರಿಂದ ಹೊರಬರಲು ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಮೇಶ್ ಬಾಬು ಅವರಿಗೆ ಮತ ಚಲಾಯಿಸುವಂತೆ ಕೆಪಿಸಿಸಿ ರಾಜ್ಯ ವಕ್ತಾರ ಲಕ್ಷ್ಮಣ್ ಮತದಾರರಲ್ಲಿ ಮನವಿ ಮಾಡಿದರು.

ಆಗ್ನೇಯ ಪದವೀಧರ ಕ್ಷೇತ್ರದ 'ಕೈ' ಅಭ್ಯರ್ಥಿಗೆ ಮತ ಹಾಕುವಂತೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಮನವಿ

ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಶಿಕ್ಷಕರು ಮತ್ತು ಪದವೀಧರರಿಗೆ ಏನಾದರೂ ಸರ್ಕಾರದ ಸವಲತ್ತುಗಳು ದೊರೆತಿವೆ ಎಂದರೆ, ಅದು ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದ್ದಾಗ ಮಾತ್ರ. ಆದರೆ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಮಾತ್ರ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಿಲ್ಲ. ಇದಕ್ಕೆ ಕಾರಣ ಈ ಕ್ಷೇತ್ರಗಳ ಮತದಾರರು ಬಿಜೆಪಿ ಹಾಗೂ ಜೆಡಿಎಸ್ ನ ಹಣದ ಆಮಿಷಗಳಿಗೆ ಸುಲಭವಾಗಿ ತುತ್ತಾಗುತ್ತಿದ್ದಾರೆ ಎಂಬ ಆಪಾದನೆಗಳು ಕೇಳಿಬರುತ್ತಿವೆ. ಇದರಿಂದ ಮತದಾರರು ಹೊರಬರಲು ಇರುವ ಏಕೈಕ ಮಾರ್ಗವೆಂದರೆ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಮೇಶ್ ಬಾಬು ಅವರನ್ನು ಗೆಲ್ಲಿಸುವುದು ಎಂದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಆರನೇ ವೇತನ ಆಯೋಗದ ಶಿಫಾರಸಿನಂತೆ ಶೇ. 30ರಷ್ಟು ವೇತನವನ್ನು ಹೆಚ್ಚಳ ಮಾಡಿದರು. ಇದರಿಂದ ಒಬ್ಬ ಸರ್ಕಾರಿ ನೌಕರರಿಗೆ ಮಾಸಿಕ ಮೂವತ್ತು ಸಾವಿರದಿಂದ ಅರವತ್ತು ಸಾವಿರದವರೆಗೆ ವೇತನ ಹೆಚ್ಚಳವಾಯಿತು, ಇದನ್ನು ಮತದಾರರು ಮರೆತಿದ್ದಾರೆ. ಜೆಡಿಎಸ್ ಹಾಗೂ ಬಿಜೆಪಿ ಆಮಿಷಗಳಿಗೆ ಈ ಬಾರಿ ಮತದಾರರು ಮಣೆ ಹಾಕಬಾರದು ಎಂದು ಮತದಾರರಲ್ಲಿ ಲಕ್ಷ್ಮಣ್​ ಮನವಿ ಮಾಡಿದರು.

ಆಗ್ನೇಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಾಬು ಮಾತನಾಡಿ, ಕಳೆದ 30 ವರ್ಷಗಳ ರಾಜಕಾರಣದಲ್ಲಿ ಮತದಾರರ ಆಶೋತ್ತರಗಳಿಗೆ ಸ್ಪಂದಿಸಿ ಕೆಲಸ ಮಾಡಿದ್ದೇನೆ. ಕಳೆದ ಸಾಲಿನಲ್ಲಿ ಒಂದು ವರ್ಷದ ಅವಧಿಗೆ ಆಗ್ನೇಯ ಶಿಕ್ಷಕರ ಕ್ಷೇತ್ರದ ಶಾಸಕನಾಗಿ ಕೆಲಸ ಮಾಡುವ ಅವಕಾಶ ಲಭಿಸಿದ್ದು, ಅತ್ಯಂತ ಪ್ರಾಮಾಣಿಕವಾಗಿ ಮತದಾರರ ಕಷ್ಟ-ಸುಖಗಳಿಗೆ ಸ್ಪಂದಿಸಿದ್ದೇನೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.