ETV Bharat / state

ಬಿಜೆಪಿಯಲ್ಲಿ ಬಿಎಸ್​​ವೈ ಅವರನ್ನು ನಡೆಸಿಕೊಂಡಿರುವ ರೀತಿ ಜನರಿಗೆ ಗೊತ್ತಿದೆ: ಈಶ್ವರ್ ಖಂಡ್ರೆ

ಯಡಿಯೂರಪ್ಪ ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದು ಬಿಜೆಪಿಯ ಆಂತರಿಕ ವಿಚಾರ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್​ ಶಾ ಹಿರಿಯರಿಗೆ ಯಾವ ರೀತಿ ನಡೆಸಿಕೊಂಡಿದ್ದಾರೆ ಎನ್ನುವುದನ್ನ ರಾಜ್ಯದ ಜನ ನೋಡಿದ್ದಾರೆ- ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ.

KPCC working president Eshwar Khandre
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ
author img

By

Published : Jul 28, 2021, 5:06 PM IST

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಹಾಗು ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ಬಿಜೆಪಿ ಹಿರಿಯ ನಾಯಕರಾದ ಅಡ್ವಾಣಿ, ಜೋಷಿ, ಯಶವಂತ್ ಸಿನ್ಹಾ ಇವರನ್ನೆಲ್ಲ ಮೊದಲು ಪಕ್ಷಕ್ಕಾಗಿ ಉಪಯೋಗಿಸಿಕೊಂಡು ನಂತರ ನಿರ್ಲಕ್ಷ್ಯಿಸಿದ್ದಾರೆ. ಅದೇ ರೀತಿ ರಾಜ್ಯದಲ್ಲೂ ಯಡಿಯೂರಪ್ಪ ಅವರನ್ನು ಬಿಜೆಪಿಯವರು ಏನ್ ಮಾಡಿದ್ದಾರೆ ಅನ್ನೋದನ್ನ ಜನರೇ ಕೇಳಬೇಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಪ್ರತಿಕ್ರಿಯೆ

ತುಮಕೂರಿನ ಸಿದ್ದಗಂಗಾ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯಡಿಯೂರಪ್ಪ ಸಾಕಷ್ಟು ಹೋರಾಟದಿಂದ ಬಂದಿದ್ದಾರೆ. ಅವರನ್ನ ಕೆಳಗಿಳಿಸಿದ್ದು, ಬಿಜೆಪಿಯ ಆಂತರಿಕ ವಿಚಾರ. ಮೋದಿ, ಶಾ ಹಿರಿಯರನ್ನು ಯಾವ ರೀತಿ ನಡೆಸಿಕೊಂಡಿದ್ದಾರೆ ಎನ್ನುವುದನ್ನ ರಾಜ್ಯದ ಜನ ನೋಡಿದ್ದಾರೆ ಎಂದರು.

ಜನಪರ ಆಡಳಿತ ನೀಡಿ:

ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದಲ್ಲಿ ಒಂದೆಡೆ ಪ್ರವಾಹ, ಮತ್ತೊಂದೆಡೆ ಕೊರೊನಾ ಸನ್ನಿವೇಶವಿದೆ. ಇಡೀ ರಾಜ್ಯದಲ್ಲಿ ಸಾವಿರಾರು ಜನರು ಕೋವಿಡ್​​ನಿಂದ ಮೃತಪಟ್ಟಿದ್ದಾರೆ. ಜನಪರ ಕಾರ್ಯಕ್ಕೆ ಒತ್ತು ಕೊಟ್ಟು, ಪ್ರಾದೇಶಿಕ ಅಸಮತೋಲನೆ ನಿವಾರಿಸಿ. ಜತೆಗೆ ಸರ್ಕಾರದಲ್ಲಿರುವ ತೊಡಕುಗಳನ್ನು ನಿವಾರಿಸುವ ಮೂಲಕ ರಾಜ್ಯದ ಅಭಿವೃದ್ಧಿಗೆ ಕ್ರಮಕೈಗೊಳ್ಳಬೇಕು ಎಂದು ಖಂಡ್ರೆ ಸಲಹೆ ನೀಡಿದರು.

ಇದನ್ನೂ ಓದಿ: ಪ್ರತಿಪಕ್ಷವಾಗಿ ಸೈದ್ಧಾಂತಿಕ ಸಂಘರ್ಷವಿದ್ದರೂ ಅಭಿವೃದ್ಧಿಯ ವಿಚಾರದಲ್ಲಿ ತಂಡವಾಗಿ ಕೆಲಸ ಮಾಡೋಣ: ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.