ತುಮಕೂರು: ರಾಜ್ಯ ಬಿಜೆಪಿ ಪಕ್ಷದಲ್ಲಿ ಎದ್ದಿದೆ ಎನ್ನಲಾಗಿರುವ ಭಿನ್ನಮತ ಕುರಿತಂತೆ ಪ್ರತಿಕ್ರಿಯಿಸಿರುವ ಸಚಿವ ಕೆ.ಎಸ್.ಈಶ್ವರಪ್ಪ, ಈ ಕುರಿತಾಗಿ ನನಗೆ ಯಾವುದೇ ಮಾಹಿತಿ ಇಲ್ಲ. ಟಿವಿಯಲ್ಲಿ ನೋಡಿ ತಿಳಿದುಕೊಂಡಿದ್ದೇನೆ ಎಂದಿದ್ದಾರೆ.
ನಗರಕ್ಕೆ ಭೇಟಿ ನೀಡಿರುವ ಸಚಿವರು ಮಾಧ್ಯಮಗಳೊಂದಿಗೆ ಮಾತನಾಡಿ, ಪಕ್ಷದಲ್ಲಿ ನಡೆಯುತ್ತಿರುವ ಬಂಡಾಯ ವಿಚಾರದ ಕುರಿತಂತೆ ನನಗೆ ಯಾವುದೇ ಮಾಹಿತಿ ಇಲ್ಲ. ಟಿವಿಯಲ್ಲಿ ನೋಡಿದ್ದೇನೆ ಅಷ್ಟೇ. ಈ ಕುರಿತಂತೆ ಯಾವುದೇ ಮಾಹಿತಿ ಇಲ್ಲ ಎಂದರು.
ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ಯತ್ನಾಳ್ ನೇತೃತ್ವದಲ್ಲಿ ಪಕ್ಷದ ನಾಯಕರು ಸೇರಿಕೊಂಡು ಸಿಎಂ ಯಡಿಯೂರಪ್ಪನವರನ್ನು ಅಧಿಕಾರದಿಂದ ಕೆಳಗಿಳಿಸಬೇಕೆಂದು ಗುಪ್ತವಾಗಿ ಸಭೆ ನಡೆಸುತ್ತಿದ್ದಾರೆ ಎನ್ನುವ ವಿಷಯ ಟಿವಿಯಲ್ಲಿ ನೋಡಿ ಮಾತ್ರ ತಿಳಿದುಕೊಂಡಿದ್ದೇನೆ. ನನಗೆ ಯಾವುದೇ ವಿಷಯ ಗೊತ್ತಿಲ್ಲ ಎಂದಿದ್ದಾರೆ.