ತುಮಕೂರು: ನಾಳೆಯಿಂದ ತುಮಕೂರು- ಬೆಂಗಳೂರು ಹಾಗೂ ಜಿಲ್ಲೆಯ ತಾಲೂಕು ಕೇಂದ್ರಗಳಿಗೆ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭಿಸಲು ತುಮಕೂರು ಡಿಪೋದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬಸ್ ಮತ್ತು ನಿಲ್ದಾಣಗಳನ್ನು ಸ್ವಚ್ಛಗೊಳಿಸುವ ಕಾರ್ಯ ನಡೆಯುತ್ತಿದೆ. ಬಸ್ ಪ್ರಯಾಣಕ್ಕೆ ಕೋವಿಡ್ ನೆಗೆಟಿವ್ ವರದಿ ತೋರಿಸುವಂತೆ ಸೂಚನೆ ನೀಡಲಾಗಿದೆ.
ಈ ಕುರಿತು ಈಟಿವಿ ಭಾರತ್ಗೆ ಮಾಹಿತಿ ನೀಡಿರುವ ತುಮಕೂರು ವಿಭಾಗಿಯ ಸಂಚಾರ ಅಧಿಕಾರಿ ಫಕ್ರುದ್ದೀನ್, ತುಮಕೂರು ಜಿಲ್ಲೆಯಲ್ಲಿ ನಾಳೆಯಿಂದ 150 ಬಸ್ಗಳು ಸಂಚಾರ ಮಾಡಲಿವೆ. ಅವಶ್ಯಕತೆ ಅನುಗುಣವಾಗಿ ಹೆಚ್ಚಿನ ಬಸ್ ಓಡಿಸಲು ನಿರ್ಧರಿಸಲಾಗಿದೆ. ತುಮಕೂರಿನಿಂದ ಬೆಂಗಳೂರಿಗೆ 40 ಬಸ್ಗಳು ಸಂಚರಿಸಲಿವೆ ಎಂದಿದ್ದಾರೆ.
ಎಲ್ಲಾ ತಾಲೂಕುಗಳಿಂದ ತಲಾ 5 ಬಸ್ಗಳು ಬೆಂಗಳೂರಿನ ಕಡೆಗೆ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ಲಸಿಕೆ ಪಡೆದ ಚಾಲಕ, ನಿರ್ವಾಹಕರಿಗೆ ಆದ್ಯತೆ ಮೇರೆಗೆ ಕೆಲಸ ಮಾಡಲ ಅವಕಾಶ ನೀಡಲಾಗ್ತದೆ. ನಮ್ಮ ವಿಭಾಗದಲ್ಲಿ 72 ಚಾಲಕರು ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ತಿಳಿಸಿದರು.
ಪ್ರಸ್ತುತ ಜಿಲ್ಲೆಯಲ್ಲಿ 8 ಮಂದಿ ಚಾಲಕರು ಕೋವಿಡ್ ಸೋಂಕಿನಿಂದ ಬಳಲುತ್ತಿದ್ದಾರೆ. ಅವರು ಸೂಕ್ತ ಚಿಕಿತ್ಸೆ ಪಡೆದ ನಂತರ ಕೆಲಸಕ್ಕೆ ಹಾಜರಾಗಲಿದ್ದಾರೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: ನಾಳೆಯಿಂದ ಬಸ್, ಮೆಟ್ರೋ ಸೇವೆ ಪುನರಾರಂಭ: ಸಾರಿಗೆ ಸಂಸ್ಥೆಗಳಿಂದ ಸಕಲ ಸಿದ್ಧತೆ