ETV Bharat / state

ಲಾರಿಗೆ ಬಸ್ ಡಿಕ್ಕಿ.. ಸ್ಥಳದಲ್ಲೇ ಮೂವರ ದುರ್ಮರಣ,16 ಮಂದಿಗೆ ಗಂಭೀರ ಗಾಯ..

ತುಮಕೂರು ಹೊರವಲಯದಲ್ಲಿರುವ ಊರುಕೆರೆ ಚೆಕ್ ಪೋಸ್ಟ್ ಬಳಿ ಖಾಸಗಿ ಬಸ್‌ವೊಂದು ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ನಡೆದಿದೆ.

author img

By

Published : Nov 3, 2019, 9:57 AM IST

ಲಾರಿಗೆ ಬಸ್ ಡಿಕ್ಕಿ

ತುಮಕೂರು: ನಗರದ ಹೊರವಲಯದಲ್ಲಿರುವ ಊರುಕೆರೆ ಚೆಕ್ ಪೋಸ್ಟ್ ಬಳಿ ಖಾಸಗಿ ಬಸ್ ಮುಂಭಾಗದಲ್ಲಿ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ನಡೆದಿದೆ.

ಲಾರಿಗೆ ಬಸ್ ಡಿಕ್ಕಿ.. ಸ್ಥಳದಲ್ಲೇ ಮೂವರ ದುರ್ಮರಣ.. 16 ಮಂದಿಗೆ ಗಂಭೀರ ಗಾಯ..

ಬೆಳಗಾವಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ನ್ಯಾಷನಲ್ ಟ್ರಾವೆಲ್ಸ್ ಹೆಸರಿನ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ಬೆಳಗ್ಗೆ 7.20ರ ಸುಮಾರಿನಲ್ಲಿ ಈ ಅಪಘಾತ ಸಂಭವಿಸಿದ್ದು, ಬಸ್ ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಲಾರಿಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಬಸ್‌ನಲ್ಲಿದ್ದ ಮೂವರು ಮೃತಪಟ್ಟಿದ್ದು, 16 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಬಸ್ಸಿನಲ್ಲಿ ಒಟ್ಟು 36 ಮಂದಿ ಪ್ರಯಾಣಿಸುತ್ತಿದ್ದರು. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.

ಗಾಯಾಳುಗಳನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Intro:Body:ಲಾರಿಗೆ ಬಸ್ ಡಿಕ್ಕಿ ಬಸ್ ನಲ್ಲಿದ್ದ ಮೂವರ ಸಾವು..... 16 ಮಂದಿಗೆ ಗಾಯ......

ತುಮಕೂರು
ತುಮಕೂರು ಹೊರವಲಯದ ಊರುಕೆರೆ ಚೆಕ್ ಪೋಸ್ಟ್ ಬಳಿ ಖಾಸಗಿ ಬಸ್ ಮುಂಭಾಗದಲ್ಲಿ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದವರು ಮೂವರು ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ನಡೆದಿದೆ.
ಮೃತರ ಗುರುತು ಪತ್ತೆಯಾಗಿಲ್ಲ. ಬಸ್ ಮುಂಭಾಗದಲ್ಲಿ ಕುಳಿತಿದ್ದ ಮೂವರು ಮೃತಪಟ್ಟಿದ್ದಾರೆ.
ನ್ಯಾಷನಲ್ ಟ್ರಾವೆಲ್ಸ್ ಹೆಸರಿನ ಖಾಸಗಿ ಬಸ್ ಬೆಳಗಾವಿ ನಿಂದ ಬೆಂಗಳೂರಿಗೆ ತೆರಳುತ್ತಿತ್ತು.
ಬಸ್ ನಲ್ಲಿದ್ದ 16 ಮಂದಿಗೆ ಗಂಭೀರ ಗಾಯಗಳಾಗಿದ್ದು ಬಸ್ಸಿನಲ್ಲಿ ಒಟ್ಟು 36 ಮಂದಿ ಪ್ರಯಾಣಿಸುತ್ತಿದ್ದರು.
ಬೆಳಗ್ಗೆ ಸುಮಾರು 7.20ರ ಸುಮಾರಿನಲ್ಲಿ ಈ ಅಪಘಾತ ಸಂಭವಿಸಿದೇ. ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಲಾರಿಯಲ್ಲಿದ್ದ ಸಾಬೂನು ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿವೆ.
ಗಾಯಾಳುಗಳನ್ನು ತುಮಕೂರು ಜಿಲ್ಲಾ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.