ತುಮಕೂರು: ಸಾರ್ವಜನಿಕರಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕಾನೂನು ಸೇವಾ ಶಿಬಿರ ನಡೆಸಲಾಗುತ್ತಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜೇಂದ್ರ ಬಾದಾಮಿ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಕಾನೂನು ಸಾಕ್ಷರತಾ ರಥದ ಉದ್ಘಾಟನೆ ಹಾಗೂ ಕಾನೂನು ಅರಿವು - ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ರಾಜೇಂದ್ರ ಬಾದಾಮಿ ಮಾತನಾಡಿದ್ರು. ಸಾರ್ವಜನಿಕರಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸುವ ಸದುದ್ದೇಶದಿಂದ ಕಾನೂನು ಸಾಕ್ಷರತಾ ರಥಕ್ಕೆ ಚಾಲನೆ ನೀಡಲಾಗಿದೆ ಎಂದ್ರು.
ನಾಲ್ಕು ದಿನಗಳ ಕಾಲ ತುಮಕೂರು ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ರಥ ಸಂಚರಿಸಲಿದ್ದು, ಸಾರ್ವಜನಿಕರಿಗೆ ಕಾನೂನಿನ ಬಗ್ಗೆ ತಿಳಿಹೇಳುವ ಕಾರ್ಯ ನಡೆಯಲಿದೆ. ನಂತರ ಜಿಲ್ಲೆಯ ಎಲ್ಲ ತಾಲೂಕಿನಲ್ಲಿ ಈ ರಥ ಸಂಚರಿಸಲಿದ್ದು, ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಮೂಡಿಸಲಿದೆ ಎಂದರು. ಕಾನೂನಿನ ಅರಿವನ್ನು ಸಾರ್ವಜನಿಕರಿಗೆ ತಿಳಿಸುವ ಉದ್ದೇಶದ ಜಾಥಾ ಇದಾಗಿದ್ದು, ಎಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು ಎಂದ್ರು.
.