ತುಮಕೂರು: ಚಿರತೆ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ತರದಕುಪ್ಪೆ ಗ್ರಾಮದಲ್ಲಿ ನಡೆದಿದೆ.
ತೋಟದಲ್ಲಿ ಆಟವಾಡುತ್ತಿದ್ದ ಆರು ವರ್ಷದ ರೇಖಾ ಚಿರತೆ ದಾಳಿಗೆ ಒಳಗಾದ ಬಾಲಕಿಯಾಗಿದ್ದಾಳೆ.
ಮುಖ ಹಾಗೂ ಕುತ್ತಿಗೆ ಭಾಗದಲ್ಲಿ ಬಾಲಕಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಬೆಂಗಳೂರಿನ ನಿಮಾನ್ಸ್ಗೆ ಸೇರಿಸಲಾಗಿದೆ.