ತುಮಕೂರು: ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಂಡಿದ್ದ ಕುಷ್ಠರೋಗ ಆಂದೋಲನ ಜಾಥಾಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಇಲಾಖೆ ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಇಲಾಖೆ ಇವರ ಸಹಯೋಗದೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಿ.ಆರ್.ಚಂದ್ರಿಕಾ ಮಾತನಾಡಿ, ಇಂದಿನಿಂದ 15 ದಿನಗಳ ಕಾಲ ಮನೆ ಮನೆಗೆ ಹೋಗಿ ಕುಷ್ಠರೋಗದ ಬಗ್ಗೆ ಸರ್ವೆ ಮಾಡಲಾಗುವುದು. ಯಾರಿಗಾದರೂ ತಿಳಿ ಬಿಳಿ ತಾಮ್ರ ಬಣ್ಣದ ಮಚ್ಚೆಗಳು ಕಂಡು ಬಂದರೆ ಒಮ್ಮೆ ಸಮೀಪದ ಆಸ್ಪತ್ರೆಗೆ ಭೇಟಿ ನೀಡಿ ಅದನ್ನು ಪರೀಕ್ಷಿಸಿಕೊಳ್ಳಿ ಎಂದರು.
ಜಾಥಾಕ್ಕೂ ಮುಂಚೆ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಹನುಮಂತರಾಯಪ್ಪ ಪ್ರತಿಜ್ಞಾವಿಧಿ ಬೋಧಿಸಿದರು.