ತುಮಕೂರು : ತಾಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ಒಂದು ವಾರ ವ್ಯಾಪಾರ-ವಹಿವಾಟನ್ನು ಸ್ಥಗಿತಗೊಳಿಸಲು ತುಮಕೂರು ವಿತರಕರ ಸಂಘದ ವತಿಯಿಂದ ನಿರ್ಧರಿಸಲಾಗಿದೆ.
ಜುಲೈ 19 ರಿಂದ ಜುಲೈ 26 ರವರೆಗೆ ತುಮಕೂರು ನಗರದ ಎಲ್ಲಾ ವಿತರಕರು ತಮ್ಮ ವ್ಯಾಪಾರ, ವಹಿವಾಟನ್ನು ಸ್ಥಗಿತಗೊಳಿಸಲು ತೀರ್ಮಾನಿಸಿದ್ದಾರೆ. ಸೋಂಕು ತುಮಕೂರು ತಾಲೂಕು ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ, ಸಿಬ್ಬಂದಿಯ ಹಿತದೃಷ್ಟಿ ಗಣನೆಗೆ ತೆಗೆದುಕೊಳ್ಳಲಾಗಿದೆ.
ಸ್ವಯಂ ಪ್ರೇರಣೆಯಿಂದ ಎಲ್ಲಾ ವ್ಯಾಪಾರಸ್ಥರು ತಮ್ಮ ವ್ಯಾಪಾರ, ವಹಿವಾಟನ್ನು ಸ್ಥಗಿತಗೊಳಿಸಲು ನಿರ್ಧರಿಸಿರುವುದಾಗಿ ತುಮಕೂರು ವಿತರಕರ ಸಂಘದ ಅಧ್ಯಕ್ಷ ನವೀನ್‌ಕುಮಾರ್ ತಿಳಿಸಿದ್ದಾರೆ. ಸಂಘದಲ್ಲಿ ತೆಗೆದುಕೊಂಡ ನಿರ್ಧಾರದಂತೆ ಪೂರಕ ಮಾಹಿತಿಯನ್ನು ತಹಶೀಲ್ದಾರ್ ಮೋಹನ್ ಕುಮಾರ್ ಅವರಿಗೆ ಸಂಘದ ಸದಸ್ಯರು ತಿಳಿಸಿದ್ದಾರೆ.