ತುಮಕೂರು : ಲೋಕಸಭಾ ಚುನಾವಣೆ ಘೋಷಣೆಯಾದ ನಂತರ ಪಕ್ಷಭೇದ ಮರೆತು ಸ್ಪರ್ಧಾಕಾಂಕ್ಷಿಗಳು ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಬಂದು ನಮಸ್ಕರಿಸುತ್ತಿದ್ದಾರೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೇಂದ್ರ ಸಚಿವ ಸದಾನಂದ ಗೌಡ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿನಿ ಅನಂತಕುಮಾರ್ ಅದೇ ರೀತಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳು ಬಂದು ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದಾರೆ.
ಶಿವಕುಮಾರ ಸ್ವಾಮೀಜಿ ಅವರ ತ್ರಿವಿಧ ದಾಸೋಹದ ಪರಿಕಲ್ಪನೆ ಇಂದಿಗೂ ಕೂಡ ಮುಂದುವರಿದಿದೆ. ಮಠದ ವಿದ್ಯಾರ್ಥಿಗಳಿಗೆ ಪೂರಕವಾದ ಶಿಕ್ಷಣ ವ್ಯವಸ್ಥೆಯೊಂದಿಗೆ ಉಳಿಸಿ ಬೆಳೆಸಿಕೊಂಡು ಹೋಗಬೇಕಾಗಿರುವ ಬಹುದೊಡ್ಡ ಜವಾಬ್ದಾರಿ ತಮ್ಮ ಮುಂದೆ ಇದೆ ಎನ್ನುತ್ತಾರೆ ಶ್ರೀ ಸಿದ್ದಲಿಂಗ ಸ್ವಾಮೀಜಿ.
ಮಠಕ್ಕೆ ಬರುವ ಭಕ್ತರು ಯಾವುದೇ ಜಾತಿ ಗುರುತಿಸಿಕೊಳ್ಳದೆ ಇಂದಿಗೂ ಕೂಡ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಮಠದಲ್ಲಿ ಬೃಹತ್ ಪ್ರಾರ್ಥನಾ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳಿಸಬೇಕಿದೆ ಮತ್ತು ಮಠದ ಆವರಣದಲ್ಲಿ ಶಿವಕುಮಾರ ಸ್ವಾಮೀಜಿ ಅವರ ಪುತ್ಥಳಿಯನ್ನು ನಿರ್ಮಿಸುವ ಜವಾಬ್ದಾರಿ ಕೂಡ ತಮ್ಮ ಮುಂದಿದೆ ಎಂದು ತಿಳಿಸಿದ್ದಾರೆ.