ತುಮಕೂರು: ಬೈಕ್ಗೆ ಲಾರಿಯೊಂದು ಡಿಕ್ಕಿ ಹೊಡೆದು, ಬೈಕ್ ಸಾವರರಿಬ್ಬರು ರಕ್ತದ ಮಡುವಿನಲ್ಲಿ ಒದ್ದಾಡಿದ ಘಟನೆ ಮಧುಗಿರಿ ತಾಲೂಕಿನ ಕೆರೆಗಳ ಪಾಳ್ಯ ಬಳಿ ನಡೆದಿದೆ.
ಓವರ್ ಟೇಕ್ ಮಾಡಲು ಹೋಗಿ ಬೈಕ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಿಗೆ ಸ್ಥಳೀಯರೇ ನೀರು ಕುಡಿಸಿ ಉಪಚರಿಸಿದ್ದಾರೆ.
ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿದರು. ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.