ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಕರಡಿ ಸಂಖ್ಯೆ ಹೆಚ್ಚಿದೆ. ನಿತ್ಯ ಹಿಂಡು ಹಿಂಡಾಗಿ ಕಾಣಿಸಿಕೊಳ್ಳತೊಡಗಿರುವುದರಿಂದ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ಮಧುಗಿರಿ ತಾಲೂಕು ಚಿನ್ನೇನಹಳ್ಳಿಯ ಸಮೀಪದ ವೀರಣ್ಣನ ಬೆಟ್ಟದಲ್ಲಿ ಕರಡಿಗಳು ವಾಸವಾಗಿದ್ದು, ರಾತ್ರಿ ಹಾಗೂ ಬೆಳಗಿನ ಜಾವ ಆಹಾರ ಅರಸಿ ಸುತ್ತಮುತ್ತಲಿನ ಗ್ರಾಮಗಳಿಗೆ ಹಿಂಡು ಹಿಂಡಾಗಿ ಲಗ್ಗೆ ಇಡುತ್ತಿವೆ. ರಸ್ತೆ, ಹೊಲ, ಕೆರೆ, ಗಿಡಗಳ ಪೊದೆ ಸೇರಿದಂತೆ ಎಲ್ಲೆಂದರಲ್ಲಿ ಕರಡಿಗಳು ಪ್ರತ್ಯಕ್ಷವಾಗುತ್ತಿವೆ.
ಕತ್ತಲಾದರೆ ಸಾಕು, ಭೀತಿಯಿಂದ ಜನರು ಮನೆಯಿಂದ ಹೊರಬರಲು ಸಹ ಹೆದರುವಂತಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಇತ್ತ ಗಮನಹರಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.