ETV Bharat / state

ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಬಿಎಸ್​ವೈ ಮನೆಗೆ ಮುತ್ತಿಗೆ.. - ಮಾದಿಗ ದಂಡೋರ ರಾಜ್ಯಾಧ್ಯಕ್ಷ ನರಸಪ್ಪ ದಂಡೋರ ಹೇಳಿಕೆ

ನ್ಯಾ. ಎ ಜೆ ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಒತ್ತಾಯಿಸಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಮಾದಿಗ ದಂಡೋರ ರಾಜ್ಯಾಧ್ಯಕ್ಷ ನರಸಪ್ಪ ದಂಡೋರ ತಿಳಿಸಿದ್ದಾರೆ.

narasappa dandhora
ಮಾದಿಗ ದಂಡೋರ ರಾಜ್ಯಾಧ್ಯಕ್ಷ ನರಸಪ್ಪ ದಂಡೋರ
author img

By

Published : Dec 18, 2019, 9:16 PM IST

ತುಮಕೂರು: ನ್ಯಾ. ಎ ಜೆ ಸದಾಶಿವ ಆಯೋಗದ ವರದಿ ಜಾರಿ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಒತ್ತಾಯಿಸಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಮಾದಿಗ ದಂಡೋರ ರಾಜ್ಯಾಧ್ಯಕ್ಷ ನರಸಪ್ಪ ದಂಡೋರ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಾಮಾಜಿಕ ನ್ಯಾಯ ಹಾಗೂ ಒಳ ಮೀಸಲಾತಿಗಾಗಿ ಮಾದಿಗ ದಂಡೋರ ಸಮಿತಿ ನಿರಂತರ ಹೋರಾಟ ಮಾಡುತ್ತಿದೆ. ಈಗಾಗಲೇ ಹಲವು ಬಾರಿ ಹೋರಾಟಗಳನ್ನು ಮಾಡಿ, ಮನವಿ ಮಾಡಿದ್ದರೂ ಈವರೆಗೂ ಯಾವುದೇ ಪ್ರಯೋಜನವಾಗಿಲ್ಲ ಎಂದರು. ಡಿಸೆಂಬರ್ 20ರಂದು ರಾಮಯ್ಯ ಆಸ್ಪತ್ರೆ ವೃತ್ತದಿಂದ ಡಾಲರ್ಸ್ ಕಾಲೋನಿಯಲ್ಲಿರುವ ಮುಖ್ಯಮಂತ್ರಿ ಮನೆಯವರೆಗೆ ಮೆರವಣಿಗೆ ಹೋಗುತ್ತೇವೆ. ಬಳಿಕ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ತಿಳಿಸಿದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವರದಿ ಜಾರಿ ಮಾಡುವುದಾಗಿ ಅಂದಿನ ಮುಖ್ಯಮಂತ್ರಿ ಭರವಸೆ ನೀಡಿದ್ದರು. ಅದಾದ ಬಳಿಕ ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿಯವರು ಕೂಡ ಎರಡು ತಿಂಗಳ ಕಾಲವಕಾಶ ಕೋರಿದ್ದರು. ಚರ್ಚೆ ಮಾಡಿ ವರದಿ ಜಾರಿ ಮಾಡುವುದಾಗಿ ತಿಳಿಸಿದ್ದರು. ಆದರೆ ಇಲ್ಲಿಯ ತನಕ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಲ್ಲಿ ರಾಜ್ಯ ಸರ್ಕಾರಗಳು ವಿಳಂಬ ಧೋರಣೆ ತೋರುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾದಿಗ ದಂಡೋರ ಸಮಿತಿ ರಾಜ್ಯಾಧ್ಯಕ್ಷ ನರಸಪ್ಪ ದಂಡೋರ..

ಹೊಳಲ್ಕೆರೆ ಶಾಸಕ ಚಂದ್ರಣ್ಣ ಅವರು ಸದಾಶಿವ ಆಯೋಗದ ವರದಿ ಜಾರಿಯಾದರೆ ರಕ್ತಪಾತವಾಗುತ್ತದೆ ಎಂದು ಹೇಳಿಕೆ ನೀಡಿದ್ದರು. ಹೀಗೆ ನಮ್ಮವರೇ ನಮ್ಮ ಹೋರಾಟಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದರು. ಎಷ್ಟೇ ಸಮಸ್ಯೆಯಾದರೂ ನ್ಯಾ. ಎ ಜೆ ಸದಾಶಿವ ಆಯೋಗದ ವರದಿ ಜಾರಿಯಾಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಜನವರಿ 26ರಂದು ಗಣರಾಜ್ಯೋತ್ಸವ. ಅದೇ ದಿನ ಕಪ್ಪು ಬಾವುಟ ಪ್ರದರ್ಶಿಸುವುದಕ್ಕೂ ಹಿಂಜರಿಯುವುದಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

Intro:ತುಮಕೂರು: ನ್ಯಾಯಮೂರ್ತಿ ಎಜೆ ಸದಾಶಿವ ಆಯೋಗದ ವರದಿ ಅನುಷ್ಠಾನ ವಿಳಂಬ ಧೋರಣೆ ಖಂಡಿಸಿ, ಅತಿ ಶೀಘ್ರದಲ್ಲಿ ವರದಿ ಜಾರಿ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿ ಡಿಸೆಂಬರ್ 20ರಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಮಾದಿಗ ದಂಡೋರ ರಾಜ್ಯಾಧ್ಯಕ್ಷ ನರಸಪ್ಪ ದಂಡೋರ ತಿಳಿಸಿದರು.

Body:ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಾಮಾಜಿಕ ನ್ಯಾಯ ಹಾಗೂ ಒಳ ಮೀಸಲಾತಿಗಾಗಿ ನಿರಂತರ ಹೋರಾಟ ಮಾಡುತ್ತಿರುವ ಮಾದಿಗ ದಂಡೋರ ಸಮಿತಿಯಿಂದ ಈಗಾಗಲೇ ಹಲವು ಬಾರಿ ಹೋರಾಟಗಳನ್ನು ಮಾಡಿ, ಮನವಿ ಮಾಡಿದ್ದರು ಇಲ್ಲಿಯವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಈ ಹಿಂದೆ ಇದ್ದಂತಹ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವರದಿ ಜಾರಿ ಮಾಡುವುದಾಗಿ ಆಗಿನ ಮುಖ್ಯಮಂತ್ರಿ ಭರವಸೆ ನೀಡಿದ್ದರು, ಅದಾದ ಬಳಿಕ ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿಯವರು ಕೂಡ ಎರಡು ತಿಂಗಳ ಕಾಲವಕಾಶ ಕೋರಿದ್ದರು. ಚರ್ಚೆ ಮಾಡಿ ವರದಿ ಜಾರಿ ಮಾಡುವುದಾಗಿ ತಿಳಿಸಿದರು, ಆದರೆ ಇಲ್ಲಿಯತನಕ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಲ್ಲಿ ರಾಜ್ಯಸರ್ಕಾರ ವಿಳಂಬ ಧೋರಣೆ ತೋರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹೀಗಾಗಿ ಡಿಸೆಂಬರ್ 20ರಂದು ರಾಮಯ್ಯ ಆಸ್ಪತ್ರೆ ವೃತ್ತದಿಂದ ಡಾಲರ್ಸ್ ಕಾಲೋನಿಯಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲು ಮೆರವಣಿಗೆ ಹೋಗುತ್ತೇವೆ, ತುಮಕೂರಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನಾಂಗದವರು ಆಗಮಿಸಿ ಹೋರಾಟಕ್ಕೆ ಸಾಥ್ ನೀಡುವಂತೆ ಮನವಿ ಮಾಡಿದರು.
ಹೊಳಲ್ಕೆರೆ ಶಾಸಕ ಚಂದ್ರಣ್ಣ ಅವರು ಸದಾಶಿವ ಆಯೋಗ ಜಾರಿಯಾದರೆ ರಕ್ತಪಾತವಾಗುತ್ತದೆ ಎಂದು ಹೇಳಿಕೆ ನೀಡಿದ್ದರು, ಹೀಗೆ ನಮ್ಮವರೇ ನಮ್ಮ ಹೋರಾಟಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ ಎಷ್ಟೇ ಸಮಸ್ಯೆಯಾದರೂ ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗ ಜಾರಿಯಾಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಜನವರಿ 26ರಂದು ಗಣರಾಜ್ಯೋತ್ಸವ ಎಂದು ನೋಡದೇ ಕಪ್ಪು ಬಾವುಟ ಪ್ರದರ್ಶಿಸುವುದಕ್ಕೂ ಹಿಂಜರಿಯುವುದಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಬೈಟ್: ನರಸಪ್ಪ ದಂಡೋರ, ರಾಜ್ಯಾಧ್ಯಕ್ಷರು, ಮಾದಿಗ ದಂಡೋರ.

Conclusion:ವರದಿ
ಸುಧಾಕರ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.