ತುಮಕೂರು : ಗಣೇಶ ನಿಮಜ್ಜನ ಬಳಿಕ ಕೆರೆಯಲ್ಲಿ ಈಜಲು ಹೋದ ವ್ಯಕ್ತಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ತುಮಕೂರಿನ ತಿಪಟೂರು ತಾಲೂಕಿನ ಅಯ್ಯನಬಾವಿ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಗೌಡನಕಟ್ಟೆ ಗ್ರಾಮದ ಮಲ್ಲಿಕಾರ್ಜುನ ಮೃತ ದುರ್ದೈವಿಯಾಗಿದ್ದಾರೆ. ತಿಪಟೂರು ಕೆರೆಯಲ್ಲಿ ಪೊಲೀಸರು ಶವವನ್ನು ಹೊರತೆಗೆದಿದ್ದಾರೆ. ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.