ತುಮಕೂರು: ಹಾಡಹಗಲೇ ಯುವಕನ ಮೇಲೆ ನಾಲ್ವರು ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ನಗರದ ಮಧುಗಿರಿ ಪಟ್ಟಣದಲ್ಲಿ ನಡೆದಿದೆ.
ವೀರಭದ್ರ(26) ಇರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಇಂದು ಬೆಳಗ್ಗೆ ಬೈಕ್ನಲ್ಲಿ ಬಂದಿದ್ದ ನಾಲ್ವರು ಏಕಾಏಕಿ ಚಾಕುವಿನಿಂದ ಇರಿದಿದ್ದಾರೆ. ಅಲ್ಲದೇ ರಸ್ತೆಯಲ್ಲಿ ಎಳೆದಾಡಿ ಥಳಿಸಿದ್ದಾರೆ. ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದರು.
ಇರಿತಕ್ಕೊಳಗಾದ ವೀರಭದ್ರ ರಸ್ತೆಯಲ್ಲಿ ನರಳಾಡುವುದ ಕಂಡು ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿ, ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಆತ ಸಾವನ್ನಪ್ಪಿದ್ದಾನೆ. ಯುವಕನ ಸಾವಿಗೆ ಹಿಂದಿನ ದಿನ ಗೆಳೆಯರೊಂದಿಗೆ ಗಲಾಟೆ ನಡೆದಿರುವುದು ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಈ ಸಂಬಂಧ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮಹಿಳೆ ಕೊಲೆ ಪ್ರಕರಣ: ಇಬ್ಬರು ಖದೀಮರ ಬಂಧನ