ತುಮಕೂರು: ಅಕ್ರಮವಾಗಿ ಗಾಂಜಾ ಬೆಳೆದು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ತುಮಕೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತನಿಂದ 8 ಕೆಜಿ ಗಾಂಜಾ ಸೊಪ್ಪನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಓಬಳಯ್ಯ ಎಂಬುವವರು ಬಂಧಿತ ಆರೋಪಿಯಾಗಿದ್ದು , ಗುಬ್ಬಿ ತಾಲೂಕಿನ ಓಬಲಾಪುರದ ತನ್ನ ಮನೆಯ ಹಿಂಭಾಗ ಅಕ್ರಮವಾಗಿ ಗಾಂಜಾ ಸೊಪ್ಪನ್ನು ಬೆಳೆದಿದ್ದ ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.