ETV Bharat / state

SSLC ವಿದ್ಯಾರ್ಥಿಗಳಿಗಾಗಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಮಾಸ್ಕ್ ವಿತರಣೆ - ತುಮಕೂರು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ

ಮುಂದಿನ ತಿಂಗಳು ಎಸ್​.ಎಸ್​.ಎಲ್​.ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ತುಮಕೂರು ಜಿಲ್ಲಾ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ಮಾಸ್ಕ್​​​ ವಿತರಿಸಲಾಗಿದೆ.

dqwsdd
ಎಸ್​.ಎಸ್​.ಎಲ್​.ಸಿ ವಿದ್ಯಾರ್ಥಿಗಳಿಗಾಗಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಮಾಸ್ಕ್
author img

By

Published : May 21, 2020, 4:03 PM IST

ತುಮಕೂರು: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ಜಿಲ್ಲೆಯ ಎಸ್​.ಎಸ್​.ಎಲ್​.ಸಿ ಪರೀಕ್ಷೆ ಬರೆಯಲು ಸಿದ್ಧವಾಗುತ್ತಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ 24,000 ಮಾಸ್ಕ್​​​ಗಳನ್ನು ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಎಂ.ಆರ್. ಕಾಮಾಕ್ಷಿ ಅವರಿಗೆ ಹಸ್ತಾಂತರಿಸಲಾಯಿತು.

ಎಸ್​.ಎಸ್​.ಎಲ್​.ಸಿ ವಿದ್ಯಾರ್ಥಿಗಳಿಗಾಗಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಮಾಸ್ಕ್

ಈ ವೇಳೆ ಮಾತನಾಡಿದ ಸ್ಕೌಟ್ಸ್ ಅಂಡ್ ಗೈಡ್ಸ್ ನ ಜಿಲ್ಲಾ ಆಯುಕ್ತೆ ಆಶಾ ಪ್ರಸನ್ನಕುಮಾರ್, ಕರ್ನಾಟಕ ರಾಜ್ಯದಲ್ಲಿ ಪರೀಕ್ಷೆ ಬರೆಯುತ್ತಿರುವ ಎಸ್​.ಎಸ್​.ಎಲ್​.ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಮಾಸ್ಕ್ ವಿತರಿಸಲು ನಿರ್ಧರಿಸಲಾಗಿತ್ತು. ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಮೂಲಕ ವಿದ್ಯಾರ್ಥಿಗಳ ಸಂಖ್ಯೆ ತಿಳಿದುಕೊಂಡು ಮಾಸ್ಕ್ ನೀಡಲಾಗಿದೆ ಎಂದರು.

ಈ ವೇಳೆ, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ, ಜಿಲ್ಲಾಧಿಕಾರಿ ಡಾ‌. ಕೆ. ರಾಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ, ಸ್ಕೌಟ್ಸ್ ಅಂಡ್ ಗೈಡ್ಸ್ ಪದಾಧಿಕಾರಿಗಳು ಹಾಜರಿದ್ದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.