ETV Bharat / state

ಹೆಚ್ಚಿನ ದರಕ್ಕೆ ಮಾಸ್ಕ್, ಸ್ಯಾನಿಟೈಸರ್ ಮಾರಾಟ... ಔಷಧಿ ಮಳಿಗೆ ವಿರುದ್ಧ ಪ್ರಕರಣ ದಾಖಲು!

author img

By

Published : Mar 18, 2020, 5:34 AM IST

ತುಮಕೂರು ನಗರದಲ್ಲಿ ಮಾಸ್ಕ್​ಗಳ ಎಂಆರ್​​ಪಿ ದರ 16.8 ರೂ. ಇರುವುದನ್ನು 130 ರೂ.ಗಳಿಗೆ ಮಾರಾಟ ಮಾಡಲಾಗುತ್ತಿದ್ದ ಆರೋಪದ ಮೇರೆಗೆ ಔಷಧಿ ಮಳಿಗೆಗೆ ದಾಳಿ ನಡೆಸಿದ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.

mask-sanitizer-sale-for-a-higher-price-in-tumkur
ಔಷಧಿ ಮಳಿಗೆ ವಿರುದ್ಧ ಪ್ರಕರಣ ದಾಖಲಿಸಿದ ಅಧಿಕಾರಿಗಳು

ತುಮಕೂರು: ಜಿಲ್ಲೆಯಲ್ಲಿ ಕೋವಿಡ್ 19 ಹಿನ್ನೆಲೆ ಕೃತಕ ಅಭಾವ ಸೃಷ್ಟಿಸಿ ಮಾಸ್ಕ್ ಹಾಗೂ ಸ್ಯಾನಿಟೈಜರ್ ಅನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದ ಔಷಧಿ ಮಳಿಗೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಆರೋಪಗಳ ಹಿನ್ನೆಲೆಯಲ್ಲಿ ತುಮಕೂರು ನಗರದಲ್ಲಿ ಸಗಟು ಮತ್ತು ಚಿಲ್ಲರೆ ಸೇರಿ ಒಟ್ಟು 15 ಔಷಧಿ ಮಳಿಗೆಗಳ ಮೇಲೆ ದಾಳಿ ನಡೆಸಲಾಗಿತ್ತು. ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮತ್ತು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರು, ಔಷಧ ನಿಯಂತ್ರಣ ಇಲಾಖೆಯ ಸಹಾಯಕ ನಿಯಂತ್ರಕರು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಜಿಲ್ಲಾ ಅಂಕಿತ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ್ದರು.

ದಾಳಿ ಸಂದರ್ಭದಲ್ಲಿ ಸ್ಯಾನಿಟೈಜರ್ ಮತ್ತು ಮಾಸ್ಕ್​ಗಳ ದಾಸ್ತಾನು ಮತ್ತು ಮಾರಾಟದ ಬಗ್ಗೆ ತಪಾಸಣೆ ಮಾಡಿದಾಗ ಎಂ.ಆರ್.ಪಿ ದರ 16.8 ರೂ. ಇರುವುದನ್ನು 130 ರೂ.ಗಳಿಗೆ ಮಾರಾಟ ಮಾಡಲಾಗುತ್ತಿತ್ತು. ಹೀಗಾಗಿ ಹೆಚ್ಚಿನ ದರಕ್ಕೆ ಮಾರಾಟ ಮಾಡಿದ 1 ಔಷಧಿ ಮಳಿಗೆಯ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.