ನಾಳೆ ಬೆಂಗಳೂರಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಬೃಹತ್ ಪ್ರತಿಭಟನೆ - Massive protests by private institutions demanding fulfillment of demand
ಖಾಸಗಿ ಶಿಕ್ಷಣ ಸಂಸ್ಥೆಗಳು ಸಮಸ್ಯೆಗಳನ್ನು ಎದುರಿಸುತ್ತಿವೆ ಹಾಗೂ ವೇತನವಿಲ್ಲದೆ ಶಿಕ್ಷಕರು ಕಂಗಾಲಾಗಿದ್ದಾರೆ ಎಂದು ಹಾಲನೂರು ಲೇಪಾಕ್ಷ ತಿಳಿಸಿದ್ದಾರೆ.
ತುಮಕೂರು: ಖಾಸಗಿ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಜನವರಿ 6ರಂದು ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಖಾಸಗಿ ಶಾಲೆಗಳ ಒಕ್ಕೂಟದ ಕಾರ್ಯಾಧ್ಯಕ್ಷ ಹಾಲನೂರು ಲೇಪಾಕ್ಷ ತಿಳಿಸಿದ್ದಾರೆ.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದ 30 ಜಿಲ್ಲೆಗಳಿಂದ ಖಾಸಗಿ ಶಾಲೆಗಳ ಶಿಕ್ಷಕರು ಹಾಗೂ ಆಡಳಿತ ಮಂಡಳಿ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಬೆಂಗಳೂರಿನ ಮೌರ್ಯ ಸರ್ಕಲ್ನಿಂದ ಫ್ರೀಡಂ ಪಾರ್ಕ್ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದಿದ್ದಾರೆ.
ಓದಿ: 'ಕುಮಾರಸ್ವಾಮಿ ವಿಚಾರದಲ್ಲಿ ಕಣ್ಣು, ಕಿವಿ, ಬಾಯಿ ಮುಚ್ಚಿಕೊಂಡಿದ್ದೇನೆ'
ಖಾಸಗಿ ಶಿಕ್ಷಣ ಸಂಸ್ಥೆಗಳು ಸಮಸ್ಯೆಗಳನ್ನು ಎದುರಿಸುತ್ತಿವೆ ಹಾಗೂ ವೇತನವಿಲ್ಲದೆ ಶಿಕ್ಷಕರು ಕಂಗಾಲಾಗಿದ್ದಾರೆ. ಸರ್ಕಾರದ ನಿಯಮಾವಳಿಗಳನ್ನು ಸಡಿಲಿಕೆ ಮಾಡಬೇಕೆಂದು ಈ ಕುರಿತಂತೆ ಶಿಕ್ಷಣ ಸಚಿವರು ಭರವಸೆ ನೀಡುವವರೆಗೆ ಪ್ರತಿಭಟನೆಯನ್ನು ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ.