ETV Bharat / state

ದೇವರಾಯನದುರ್ಗ ಅರಣ್ಯದಲ್ಲಿ ವೈದ್ಯಕೀಯ ತ್ಯಾಜ್ಯ ವಿಲೇವಾರಿ: ಪರಿಸರವಾದಿಗಳ ಆತಂಕ - ತುಮಕೂರು

ತುಮಕೂರು ತಾಲೂಕಿನಲ್ಲಿರುವ ದೇವರಾಯನದುರ್ಗ ಅರಣ್ಯದಲ್ಲಿ ನಗರದ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಬಳಸಲಾಗಿದ್ದ ಸಿರೇಂಜ್, ಹ್ಯಾಂಡ್ ಗ್ಲೋಸ್, ಮಾಸ್ಕ್ ಸೇರಿದಂತೆ ಇತರೆ ವೈದ್ಯಕೀಯ ತ್ಯಾಜ್ಯವನ್ನು ರಾತ್ರೋರಾತ್ರಿ ತಂದು ಸುರಿಯಲಾಗುತ್ತಿದೆ. ಈ ಬಗ್ಗೆ ಪರಿಸರವಾದಿಗಳು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

Tumakur
ದೇವರಾಯನದುರ್ಗ ಅರಣ್ಯದಲ್ಲಿ ವೈದ್ಯಕೀಯ ತ್ಯಾಜ್ಯ ವಿಲೇವಾರಿ
author img

By

Published : Jun 13, 2021, 9:58 AM IST

ತುಮಕೂರು: ಜಿಲ್ಲೆಯ ದೇವರಾಯನ ದುರ್ಗ ಅರಣ್ಯ ಪ್ರದೇಶದಲ್ಲಿ ನಗರದ ಆಸ್ಪತ್ರೆಗಳ ಅಪಾಯಕಾರಿ ವೈದ್ಯಕೀಯ ತ್ಯಾಜ್ಯವನ್ನು ವಿಲೇವಾರಿ ಮಾಡಲಾಗುತ್ತಿದ್ದು, ಈ ಬಗ್ಗೆ ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಮುಖ್ಯವಾಗಿ ಆಸ್ಪತ್ರೆಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಎಸೆಯುತ್ತಿರುವುದು ಪರಿಸರಕ್ಕೆ ಮಾರಕವಾಗಿದೆ.

ವೈದ್ಯಕೀಯ ತ್ಯಾಜ್ಯ ವಿಲೇವಾರಿ: ಪರಿಸರವಾದಿಗಳ ಆತಂಕ

ನಗರದ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಬಳಸಲಾಗಿದ್ದ ಸಿರೇಂಜ್, ಹ್ಯಾಂಡ್ ಗ್ಲೋಸ್, ಮಾಸ್ಕ್ ಸೇರಿದಂತೆ ಇತರೆ ವೈದ್ಯಕೀಯ ತ್ಯಾಜ್ಯವನ್ನು ರಾತ್ರೋರಾತ್ರಿ ತಂದು ಸುರಿಯಲಾಗುತ್ತಿದೆ. ಈ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಪರಿಸರವಾದಿಗಳು, ಅರಣ್ಯದಲ್ಲಿರುವ ಕಾಡು ಪ್ರಾಣಿಗಳು ಕೂಡ ಕೊರೊನಾ ಸೋಂಕಿಗೆ ಒಳಗಾಗುವ ಆತಂಕ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ದೇವರಾಯನದುರ್ಗ ಅರಣ್ಯ ಪ್ರದೇಶಕ್ಕೆ ಕಟ್ಟಡ ನಿರ್ಮಾಣ ಹಾಗೂ ಮಾಂಸ ತ್ಯಾಜ್ಯವನ್ನು ತಂದು ಎಸೆಯಲಾಗುತ್ತಿತ್ತು. ಇದನ್ನು ತಡೆಯಲು ಅರಣ್ಯ ಇಲಾಖೆ ಮತ್ತು ಮಹಾನಗರ ಪಾಲಿಕೆ ಸಾಕಷ್ಟು ಪ್ರಯತ್ನ ನಡೆಸಿ ನಿಯಂತ್ರಣಕ್ಕೆ ತಂದಿದ್ದರು. ಇದೀಗ ಅಪಾಯಕಾರಿ ಆಸ್ಪತ್ರೆ ತ್ಯಾಜ್ಯವನ್ನು ತಂದು ಸುರಿಯುತ್ತಿದ್ದು, ಮತ್ತೆ ಆತಂಕಕ್ಕೆ ಕಾರಣವಾಗಿದೆ.

ಪರಿಸರ ಪ್ರೇಮಿ ಮಲ್ಲಿಕಾರ್ಜುನ ಅವರು ಆಸ್ಪತ್ರೆಗಳಿಂದ ಹೊರಬರುವ ತ್ಯಾಜ್ಯವನ್ನು ಅರಣ್ಯಕ್ಕೆ ಸುರಿದಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದ ಎಚ್ಚೆತ್ತ ತುಮಕೂರು ಮಹಾನಗರ ಪಾಲಿಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಆಸ್ಪತ್ರೆ ತ್ಯಾಜ್ಯವನ್ನು ಪರಿಶೀಲಿಸಿ ಅದರಲ್ಲಿ ದಾಖಲೆಗಳನ್ನು ಪ್ರಕಾರ ಕ್ಯಾತಸಂದ್ರದಲ್ಲಿರುವ ಈಶ್ವರ ಡಯಾಗ್ನೋಸ್ಟಿಕ್ ಸೆಂಟರ್ ಹಾಗೂ ಬಡ್ಡಿ ಹಳ್ಳಿಯಲ್ಲಿರುವ ಮಂಜುನಾಥ ಕ್ಲಿನಿಕ್​​​ಗೆ ನೋಟಿಸ್ ಜಾರಿ ಮಾಡಿದ್ದಾರೆ.

ಕೊರೊನಾ ಸೋಂಕಿನ ಭೀತಿಯ ನಡುವೆಯೂ ಆಸ್ಪತ್ರೆ ತ್ಯಾಜ್ಯವನ್ನು ಅರಣ್ಯ ಪ್ರದೇಶಕ್ಕೆ ಸುರಿಯುತ್ತಿರುವುದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಇದಕ್ಕೆ ಕಡಿವಾಣ ಹಾಕಲು ನಿರಂತರವಾಗಿ ಅರಣ್ಯ ಪ್ರದೇಶಗಳಲ್ಲಿ ಗಸ್ತು ತಿರುಗಬೇಕು ಎಂದು ಪರಿಸರವಾದಿಗಳು ಆಗ್ರಹಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.