ETV Bharat / state

ಲಾಕ್​ಡೌನ್​ನಿಂದ ಕಕ್ಷಿದಾರರು, ವಕೀಲರು ಸಂಕಷ್ಟಕ್ಕೆ: ಸೆ.19ರಂದು ಮೆಗಾ ಇ-ಲೋಕ್ ಅದಾಲತ್ - ಮೇಘಾ ಇ-ಲೋಕ್ ಅದಾಲತ್

ದೇಶದಲ್ಲಿ ಮೊದಲ ಬಾರಿಗೆ ಸೆಪ್ಟೆಂಬರ್ 19 ರಂದು ಮೆಗಾ ಇ-ಲೋಕ್ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ.

Meeting
Meeting
author img

By

Published : Aug 29, 2020, 12:26 AM IST

ತುಮಕೂರು: ಕೊರೊನಾ ಲಾಕ್​ಡೌನ್​ನಿಂದ ಕಕ್ಷಿದಾರರು ಹಾಗೂ ವಕೀಲರು ತೊಂದರೆಗೆ ಒಳಗಾಗಿದ್ದು, ಈ ಸಂದರ್ಭದಲ್ಲಿ ಅವರಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಇ-ಲೋಕ್ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕಾರಿ ಅಧ್ಯಕ್ಷ ಹಾಗೂ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಜಸ್ಟೀಸ್ ಅರವಿಂದ ಕುಮಾರ್ ತಿಳಿಸಿದ್ದಾರೆ.

ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿಂದು ನಡೆದ ವಿಡಿಯೋ ಕಾನ್ಫೆರೆನ್ಸ್ ಮೂಲಕ ಈ ವಿಷಯ ತಿಳಿಸಿದ ಅವರು, ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಮೋಟಾರು ವಾಹನ ಅಪಘಾತ ಪರಿಹಾರ ಅರ್ಜಿ, ರಾಜಿಯಾಗತಕ್ಕಂತಹ ಕ್ರಿಮಿನಲ್ ಪ್ರಕರಣ, ಸಿವಿಲ್ ದಾವೆ ಮತ್ತು ನೆಗೋಷಿಯಬಲ್ ಇನ್ಸ್ರುಮೆಂಟ್ ಕಾಯ್ದೆಯಡಿ ದಾಖಲಾದ ಪ್ರಕರಣಗಳನ್ನು ಮಾತುಕತೆ ಮೂಲಕ ತೀರ್ಮಾನಗೊಳಿಸುವ ಮೆಗಾ ಇ-ಲೋಕ್ ಅದಾಲತ್ ಅನ್ನು ದೇಶದಲ್ಲಿ ಮೊದಲ ಬಾರಿಗೆ ಸೆಪ್ಟೆಂಬರ್ 19 ರಂದು ಹಮ್ಮಿಕೊಳ್ಳಲಾಗಿದೆ ಎಂದರು.

ಇ-ಲೋಕ್ ಅದಾಲತ್ ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿ ಆಗಬಹುದಾದ ಪ್ರಕರಣಗಳಾದ ಮೋಟಾರ್ ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಹಣಕಾಸು ಸಂಸ್ಥೆಗಳಿಗೆ ಸಂಬಂಧಿಸಿದ ಪ್ರಕರಣಗಳು, ಕ್ರಿಮಿನಲ್ ಪ್ರಕರಣಗಳು ಜೊತೆಗೆ ಇತರೆ ಸಿವಿಲ್ ಪ್ರಕರಣಗಳು, ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು (ವಿವಾಹ ವಿಚ್ಛೇದನ ಹೊರತುಪಡಿಸಿ) ಮತ್ತು ಇತರೆ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದು ತಿಳಿಸಿದರು.

ಕಕ್ಷಿದಾರರು ಈ ಸದವಕಾಶವನ್ನು ಬಳಸಿಕೊಳ್ಳಬೇಕು. ಕಕ್ಷಿದಾರರು ಮನೆ, ಕಚೇರಿ ಅಥವಾ ವಕೀಲರ ಕಚೇರಿಯಲ್ಲಿ ಮೊಬೈಲ್, ಕಂಪ್ಯೂಟರ್ ಮೂಲಕ ಇ-ಲೋಕ್ ಅದಾಲತ್​ನಲ್ಲಿ ಭಾಗವಹಿಸಬಹುದಾಗಿರುತ್ತದೆ ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ ಇ-ಲೋಕ್ ಅದಾಲತ್ ಮೂಲಕ 87 ಪ್ರಕರಣ ಇತ್ಯರ್ಥಪಡಿಸಲಾಗಿದೆ. ಕಳೆದ ಆಗಸ್ಟ್ 10ರಿಂದ ಜಿಲ್ಲೆಯಲ್ಲಿ ಜಿಲ್ಲಾ ನ್ಯಾಯಾಲಯ ಹಾಗೂ ಜಿಲ್ಲೆಯ ಎಲ್ಲಾ ತಾಲೂಕು ನ್ಯಾಯಾಲಯಗಳಲ್ಲಿ ಇ-ಲೋಕ್ ಅದಾಲತ್ ನಡೆಯುತ್ತಿದ್ದು, ಇಲ್ಲಿಯವರೆಗೂ 87 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾಯಾಧೀಶ ಜಿ.ಎಸ್. ಸಂಗ್ರೇಶಿ ತಿಳಿಸಿದ್ದಾರೆ.

ಕೊರೊನಾ ಲಾಕ್ ಡೌನ್ ನಿಂದಾಗಿ ಕಕ್ಷಿದಾರರು ಹಾಗೂ ವಕೀಲರು ತೊಂದರೆಗೆ ಒಳಗಾಗಿದ್ದು, ಇ-ಲೋಕ್ ಅದಾಲತ್​ನಿಂದ ಅನುಕೂಲವಾಗಲಿದೆ. ಸೆಪ್ಟೆಂಬರ್ 19ರಂದು ನಡೆಯುವ ಮೆಗಾ ಇ-ಲೋಕ್ ಅದಾಲತ್ ಅನ್ನು ಜನರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.