ತುಮಕೂರು: ಸ್ವ-ಉದ್ಯೋಗದ ಪ್ರವೃತ್ತಿಯನ್ನು ಬೆಳೆಸುವುದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ನಗರದಲ್ಲಿ ಅಯೋಜಿಸಲಾಗಿದ್ದ ಕಾರ್ಯಕರ್ತರಿಗೆ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ಶ್ರಮಕ್ಕೆ ತಕ್ಕ ಬೆಲೆ ಲಭಿಸಬೇಕು. ಹಾಗಾಗಿ ಸ್ವ-ಸಹಾಯ ಸಂಘಗಳ ರಚನೆ ಮಾಡಿ, ಅನೇಕ ಯೋಜನೆಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಓದಿ : ದಂತ ಚಿಕಿತ್ಸೆಯ ದರ ನಮ್ಮಲ್ಲೇ ಕಡಿಮೆ ಇರೋದು: ಸಚಿವ ಸುಧಾಕರ್
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳ ಮೂಲಕ ಅನೇಕ ಮಂದಿ ತಮ್ಮ ಬದುಕು ಹಸನು ಮಾಡಿಕೊಂಡಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವ ಜನರಿಗೆ ಸ್ವ-ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಬ್ಯಾಂಕ್ ಮೂಲಕ ಆರ್ಥಿಕ ನೆರವನ್ನು ಒದಗಿಸಿಕೊಡಲಾಗುತ್ತಿದೆ ಎಂದು ಹೇಳಿದರು.