ತುಮಕೂರು : ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಹಾಲಿನ ಟ್ಯಾಂಕರ್ ಉರುಳಿ ಬಿದ್ದ ಪರಿಣಾಮ ಸಾವಿರಾರು ಲೀಟರ್ ಹಾಲು ಮಣ್ಣು ಪಾಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ರಸ್ತೆ ಬದಿ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಇನ್ನೊಂದೆಡೆ ಟ್ಯಾಂಕರ್ನಿಂದ ಸೋರಿಕೆಯಾಗುತ್ತಿದ್ದ ಹಾಲನ್ನು ಸಂಗ್ರಹಿಸಲು ಸುತ್ತಮುತ್ತಲ ಗ್ರಾಮಸ್ಥರು ಮುಗಿಬಿದ್ದು, ಬಿಂದಿಗೆ, ಬಾಟಲ್ಗಳನ್ನು ತಂದು ಟ್ಯಾಂಕರ್ನಿಂದ ಸೋರುತ್ತಿದ್ದ ಹಾಲನ್ನು ತುಂಬಿಸಿಕೊಂಡು ಹೋಗಿದ್ದಾರೆ. ಇನ್ನು, ಘಟನೆ ಸಂಬಂಧ ಮಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.