ETV Bharat / state

ಬಿಎಸ್​​​ವೈ ಲಕ್ಷಾಂತರ ಪಕ್ಷದ ಕಾರ್ಯಕರ್ತರಿಗೆ ಪ್ರೇರಣೆ : ಸಚಿವ ಕೆ ಎಸ್ ಈಶ್ವರಪ್ಪ

author img

By

Published : Aug 18, 2021, 7:03 PM IST

ಇಡೀ ರಾಜ್ಯದಲ್ಲಿ ಬಿಜೆಪಿ ಪಕ್ಷದಲ್ಲಿ ಯಾರಿಗೆ ಯಾವ ಸ್ಥಾನ ನೀಡಬೇಕು ಎಂಬುದು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ ಎಂದು ವಿಜಯೇಂದ್ರ ಅವರಿಗೆ ಸ್ಥಾನಮಾನ ನೀಡುವ ಕುರಿತಂತೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದರು..

Minister Eshwarappa
ಸಚಿವ ಈಶ್ವರಪ್ಪ

ತುಮಕೂರು : ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪಯವರು ಇಡೀ ರಾಜ್ಯದಲ್ಲಿ ಪಕ್ಷವನ್ನು ಸಂಘಟನೆ ಮಾಡಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಯಶಸ್ವಿಯಾಗಿದ್ದಾರೆ. ನಮ್ಮಂತಹ ಲಕ್ಷಾಂತರ ಕಾರ್ಯಕರ್ತರಿಗೆ ಪ್ರೇರಣೆಯಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು.

ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ಈ ಶ್ವರಪ್ಪ

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಜಾಸ್ತಿ ದಿನಗಳು ಆಗಿಲ್ಲ. ಮುಂದಿನ ದಿನಗಳಿಗೆ ಏನು ಮಾಡಬೇಕು ಎಂಬುದನ್ನು ಅವರನ್ನು ಕೇಳಿ ತಿಳಿಯಬೇಕಿದೆ ಎಂದರು.

ಬಿಎಸ್​ವೈ ಇಡೀ ಜೀವನ ಬಿಜೆಪಿ ಪಕ್ಷದ ಸಂಘಟನೆಯಲ್ಲಿ ಕೆಲಸ ಮಾಡುತ್ತೇನೆ ಎಂದಿದ್ದಾರೆ. ಆ ನಿಟ್ಟಿನಲ್ಲಿ ನಮಗೆಲ್ಲರಿಗೂ ಅವರ ಮಾರ್ಗದರ್ಶನ ಮಾಡಲಿದ್ದಾರೆ ಎಂಬ ವಿಶ್ವಾಸ ನನಗಿದೆ ಎಂದರು.

ಇಡೀ ರಾಜ್ಯದಲ್ಲಿ ಬಿಜೆಪಿ ಪಕ್ಷದಲ್ಲಿ ಯಾರಿಗೆ ಯಾವ ಸ್ಥಾನ ನೀಡಬೇಕು ಎಂಬುದು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ ಎಂದು ವಿಜಯೇಂದ್ರ ಅವರಿಗೆ ಸ್ಥಾನಮಾನ ನೀಡುವ ಕುರಿತಂತೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ಓದಿ: ದೆಹಲಿ ಪ್ರವಾಸ? "ಎಲ್ಲಿಯೂ ಹೋಗಿಲ್ಲ ಇಲ್ಲೆ ಇರುವೆ‌": ಈಟಿವಿ ಭಾರತದ ಜತೆ ಮಾತನಾಡಿದ ಆನಂದ್​ ಸಿಂಗ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.