ತುಮಕೂರು: ರೈತರು ಮತ್ತು ಅಕ್ಕಿ ಗಿರಣಿ ಮಾಲೀಕರ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.
ತುಮಕೂರು ನಗರದ ಸಪ್ತಗಿರಿ ಆಗ್ರೋ ಇಂಡಸ್ಟ್ರೀಸ್ ಕಾರ್ಖಾನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರ ಹಿತ ಕಾಯುವಲ್ಲಿ ರೈಸ್ ಮಿಲ್ಗಳ ಪಾತ್ರ ಮುಖ್ಯವಾಗಿರುತ್ತದೆ. ಅಲ್ಲದೆ ಸಪ್ತಗಿರಿಯ ಆಗ್ರೋ ಇಂಡಸ್ಟ್ರೀಸ್ನಲ್ಲಿ ಅಕ್ಕಿ ಮಿಲ್ಲಿಂಗ್ ಬಗ್ಗೆ ವಿಶೇಷ ಗಮನ ಹರಿಸಲಾಗುತ್ತಿದೆ ಇಲ್ಲಿನ ಗುಣಮಟ್ಟವನ್ನು ಪರಿಶೀಲಿಸಿದ ನಂತರ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಸಚಿವ ಆನಂದ್ ಸಿಂಗ್, ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ, ಸಿರುಗುಪ್ಪ ಶಾಸಕ ಸೋಮಲಿಂಗಪ್ಪ, ಸಪ್ತಗಿರಿ ಆಗ್ರೋ ಇಂಡಸ್ಟ್ರೀಸ್ ಮಾಲಿಕ ಶ್ರೀಧರ್ ಬಾಬು ಹಾಜರಿದ್ದರು.