ETV Bharat / state

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಕೊರೊನಾ ಸೋಂಕಿತರಿಗೆ ಸರ್ಕಾರದ ಸೌಲಭ್ಯ ಸಿಗಲ್ಲ: ಸಚಿವ ಮಾಧುಸ್ವಾಮಿ - ಸಚಿವ ಜೆ ಸಿ ಮಾಧುಸ್ವಾಮಿ ಹೇಳಿಕೆ

ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗದೇ ನೇರವಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದವರಿಗೆ ಪರಿಹಾರ ನೀಡೋದು ಕಷ್ಟವಾಗಲಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವೈದ್ಯಕೀಯ ವೆಚ್ಚವಾಗಲಿ, ಕೋವಿಡ್ ಸಾವಿನ ಪರಿಹಾರ ಆಗಲಿ ಈ ಬಾರಿ ಸಿಗೋದಿಲ್ಲ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ಸಚಿವ ಜೆ ಸಿ ಮಾಧುಸ್ವಾಮಿ
ಸಚಿವ ಜೆ ಸಿ ಮಾಧುಸ್ವಾಮಿ
author img

By

Published : Jan 20, 2022, 5:03 PM IST

ತುಮಕೂರು : ಕೊರೊನಾ ಮೂರನೇ ಅಲೆ ವೇಳೆ ಸೋಂಕಿತರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯದೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮೃತಪಟ್ಟರೆ ಸರ್ಕಾರದಿಂದ ಸಿಗಬಹುದಾದಂತಹ ಪರಿಹಾರಗಳು ಸಿಗುವುದಿಲ್ಲ ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.

ತುಮಕೂರಿನಲ್ಲಿ ಸಚಿವ ಜೆ ಸಿ ಮಾಧುಸ್ವಾಮಿ ಹೇಳಿಕೆ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಪೂರಕವಾಗಿ ಎಲ್ಲಾ ಚಿಕಿತ್ಸಾ ಸೌಲಭ್ಯವನ್ನು ಕಲ್ಪಿಸಲಾಗಿದೆ. ಈ ನಡುವೆಯೂ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದರೆ, ಮಾತ್ರ ಆಸ್ಪತ್ರೆಯ ವೈದ್ಯಾಧಿಕಾರಿಗಳು ಖಾಸಗಿ ಆಸ್ಪತ್ರೆಗೆ ಕಳುಹಿಸಿಕೊಡಲಿದ್ದಾರೆ. ಅಂತಹ ಸಂದರ್ಭದಲ್ಲಿ ಪರಿಹಾರ ಸಿಗುವ ಸಾಧ್ಯತೆ ಇರುತ್ತದೆ. ಆದರೆ ನೇರವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆ ಅಂತವರಿಗೆ ಸರ್ಕಾರಿ ಸೌಲಭ್ಯಗಳು ಸಿಗುವ ಸಾಧ್ಯತೆ ಕಡಿಮೆ ಎಂದರು.

ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗದೇ ನೇರವಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದವರಿಗೆ ಪರಿಹಾರ ನೀಡೋದು ಕಷ್ಟವಾಗಲಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವೈದ್ಯಕೀಯ ವೆಚ್ಚವಾಗಲಿ, ಕೋವಿಡ್ ಸಾವಿನ ಪರಿಹಾರ ಆಗಲಿ ಈ ಬಾರಿ ಸಿಗೋದಿಲ್ಲ. ಸರ್ಕಾರಿ ಆಸ್ಪತ್ರೆಯಲ್ಲಿ ಸಾಕಷ್ಟು ಸೌಲಭ್ಯ ಇದೆ. ಅದ್ಯಾವುದು ಬಳಕೆ ಆಗುತ್ತಿಲ್ಲ. ಹಾಗಾಗಿ ಸರ್ಕಾರಿ ಸೌಲಭ್ಯ ಪಡೆಯಬೇಕಾದರೆ ಸರ್ಕಾರಿ ಆಸ್ಪತ್ರೆಯಲ್ಲೇ ದಾಖಲಾತಿ ಕಡ್ಡಾಯ ಎಂದು ಹೇಳಿದ್ದಾರೆ.

ಜಾಹಿರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.