ETV Bharat / state

ಕಾಂಗ್ರೆಸ್​ಗೆ ಜನಪ್ರಿಯತೆ ಇದೆ ಎಂಬ ಕಾರಣಕ್ಕೆ ಜೆಡಿಎಸ್-ಬಿಜೆಪಿಗೆ ಆತಂಕ: ಸಚಿವ ಕೃಷ್ಣ ಬೈರೇಗೌಡ - ಕಂದಾಯ ಇಲಾಖೆ

ಕಾಂಗ್ರೆಸ್​ ಪಕ್ಷಕ್ಕೆ ಜನಪ್ರಿಯತೆ ಇರುವುದರಿಂದ ಜೆಡಿಎಸ್ ಮತ್ತು ಬಿಜೆಪಿಯವರು ಮೈತ್ರಿ ಮಾಡಿಕೊಳ್ಳಬಹುದು, ಮಾಡಿಕೊಂಡರೆ ನಮಗೆ ಚಿಂತೆ ಇಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

minister-krishna-byre-gowda-reaction-on-bjp-and-jds-party-alliance
ಕಾಂಗ್ರೆಸ್​ಗೆ ಜನಪ್ರಿಯತೆ ಇದೆ ಎಂದು ಜೆಡಿಎಸ್ ಮತ್ತು ಬಿಜೆಪಿಯವರು ಆತಂಕದಲ್ಲಿದ್ದಾರೆ: ಸಚಿವ ಕೃಷ್ಣ ಬೈರೇಗೌಡ
author img

By ETV Bharat Karnataka Team

Published : Sep 8, 2023, 6:11 PM IST

ಕಂದಾಯ ಸಚಿವ ಕೃಷ್ಣ ಬೈರೇಗೌಡ

ತುಮಕೂರು: ರಾಜ್ಯದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಜನಪ್ರಿಯತೆ ಇದೆ ಎಂದು ಜೆಡಿಎಸ್ ಮತ್ತು ಬಿಜೆಪಿಯವರು ಆತಂಕದಲ್ಲಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ತುಮಕೂರಿನಲ್ಲಿ ಮಾತನಾಡಿದ ಅವರು, ಈ ಆತಂಕದಿಂದ ಜೆಡಿಎಸ್ ಮತ್ತು ಬಿಜೆಪಿಯವರು ಮೈತ್ರಿ ಮಾಡಿಕೊಳ್ಳಬಹುದು ನನಗೆ ಗೊತ್ತಿಲ್ಲ. ಮಾಡಿಕೊಂಡರು ನಮಗೆ ಚಿಂತೆ ಇಲ್ಲ. ಬಿಜೆಪಿ ಸರ್ಕಾರದ ಆಡಳಿತದಿಂದ ಜನರ ಜೀವನ ದುಸ್ತರ ಆಗಿದ್ದು, ಉದ್ಯೋಗ ಕೊಡುತ್ತೀವಿ ಎಂದು ಹೇಳಿ ಕೋಟ್ಯಂತರ ಉದ್ಯೋಗ ಕಿತ್ತುಕೊಂಡಿದ್ದಾರೆ. ಬಡವರ ಮೇಲೆ ಟ್ಯಾಕ್ಸ್​ ಹಾಕಿ ಶ್ರೀಮಂತರನ್ನು ಸಾಕುವಂತಹ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಎಂದು ಆರೋಪಿಸಿದರು.

ವಿಧಾನಸಭಾ ಚುನಾವಣಾ ಫಲಿತಾಂಶ ಬಂದು ನಾಲ್ಕು ತಿಂಗಳಾಗಿದೆ. ವಿಪಕ್ಷ ನಾಯಕರನ್ನು ಆಯ್ಕೆ ಮಾಡಲು ಅವರಿಂದ ಇನ್ನೂ ಸಾಧ್ಯವಾಗಿಲ್ಲ. ಇದು ನಾಲಾಯಕತನ, ಅವರ ಆಂತರಿಕ ಕಚ್ಚಾಟದಿಂದ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿಕೊಂಡಿಲ್ಲ. ಇವತ್ತು ತುಮಕೂರು ಜಿಲ್ಲೆಗೆ ಬಂದಿದ್ದೇನೆ. ನಾಡಕಚೇರಿ, ತಾಲೂಕು ಕಚೇರಿ, ಸಬ್ ರಿಜಿಸ್ಟರ್ ಕಚೇರಿ ಪರಿಶೀಲನೆ ನಡೆಸಿದ್ದೇನೆ. ಜನರ ಸಮಸ್ಯೆ ಆಲಿಸಿದ್ದೇನೆ, ಅಧಿಕಾರಿಗಳ‌ ಕೆಲಸ ಪರಿಶೀಲಿಸಿದ್ದೇನೆ. ನನ್ನ‌ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಕರೆದಿದ್ದೇನೆ ಎಂದು ತಿಳಿಸಿದರು.

ಕಂದಾಯ ಇಲಾಖೆಯಲ್ಲಿ ಸಾಕಷ್ಟು ಸಮಸ್ಯೆಯಿದೆ. ಅಂತಹ ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡುತ್ತಿದ್ದೇನೆ.‌ ಇವತ್ತು ಸಂಜೆವರೆಗೂ ಪರಿಶೀಲನೆ ನಡೆಸುತ್ತೇನೆ. ಜನಪರ ಸೇವೆ ಕೊಡಬೇಕು ಅನ್ನೋದು ನಮ್ಮ ಸರ್ಕಾರದ ಉದ್ದೇಶ ಎಂದ ಅವರು, ಗುಬ್ಬಿ ತಾಲೂಕುನಲ್ಲಿ ನಕಲಿ ಖಾತೆ ಪ್ರಕರಣಗಳ ಬಗ್ಗೆ ಮಾತನಾಡಿ, ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ. ಲೋಕಾಯುಕ್ತ ತನಿಖಾ ವರದಿ ಬಳಿಕ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಗುಬ್ಬಿ ತಹಶೀಲ್ದಾರ್​ ಕಚೇರಿಗೆ ಭೇಟಿ: ತುಮಕೂರು ಜಿಲ್ಲೆಯ ಪ್ರವಾಸ ಕೈಗೊಂಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇಂದು ಬೆಳಗ್ಗೆ ದಿಢೀರ್​ ಗುಬ್ಬಿ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ನಡೆಸಿದರು. ಗುಬ್ಬಿ ತಾಲೂಕಿನಲ್ಲಿ ನಡೆದಿದ್ದ ಸರ್ಕಾರಿ ಜಮೀನು ಗೋಲ್ಮಾಲ್ ಪ್ರಕರಣ ಸಂಬಂಧ ಕಚೇರಿಯಲ್ಲಿ ಕಡತಗಳ ಪರಿಶೀಲನೆ, ರೆಕಾರ್ಡ್‌ ರೂಂ, ಹಾಗೂ ತಹಶೀಲ್ದಾರ್​ ಕಚೇರಿ ಪರಿಶೀಲನೆ ನಡೆಸಿದ ಸಚಿವರು, ಗುಬ್ಬಿ ತಹಶೀಲ್ದಾರ್​ ಹಾಗೂ ಕಚೇರಿಯ ಸಿಬ್ಬಂದಿ ಜೊತೆ ಮಾತುಕತೆ ನಡೆಸಿದರು. ಈ ವೇಳೆ, ಜಿಲ್ಲಾಧಿಕಾರಿ ಕೆ ಶ್ರೀನಿವಾಸ್, ಶಾಸಕ ಎಸ್ ಆರ್ ಶ್ರೀನಿವಾಸ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಕಳೆದ ಒಂದೂವರೆ ವರ್ಷದ ಹಿಂದೆ ಗುಬ್ಬಿ ತಾಲೂಕಿನಲ್ಲಿ ನಡೆದಿದ್ದ 1500 ಎಕರೆ ಭೂ ಹಗರಣ ಮತ್ತು ಸರ್ಕಾರಿ ಜಮೀನಿನ ನಕಲಿ ದಾಖಲೆ ಸೃಷ್ಟಿಸಿ ಗೋಲ್ಮಾಲ್ ಮಾಡಿದ್ದ ತಹಶೀಲ್ದಾರ್​ ಕಚೇರಿಯ ಅಧಿಕಾರಿಗಳು ಹಾಗೂ ಮಧ್ಯವರ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಹಲವರ ವಿರುದ್ಧ ಕಾನೂನು ಕ್ರಮವನ್ನು ಪೊಲೀಸರು ಕೈಗೊಂಡಿದ್ದರು. ಈ ಪ್ರಕರಣ ಸಂಬಂಧ ಇಂದು ಗುಬ್ಬಿ ತಹಶೀಲ್ದಾರ್​ ಕಚೇರಿಗೆ ಸಚಿವರು ದಿಢೀರ್​ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ನಮ್ಮದು ಆಪರೇಷನ್ ಅಲ್ಲ, ಕೋ-ಆಪರೇಷನ್: ಡಿಸಿಎಂ ಡಿಕೆಶಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.