ETV Bharat / state

ಸಿಕ್ಕ ಅಧಿಕಾರ ಸರಿಯಾಗಿ ಬಳಸದಿದ್ದರೆ ಅಯೋಗ್ಯನಾಗುವೆ: ಸಚಿವ ಈಶ್ವರಪ್ಪ - ತುಮಕೂರು ಇತ್ತಿಚಿನ ಸುದ್ದಿ

ತುಮಕೂರು ಜಿಲ್ಲೆಯಲ್ಲಿ 6 ತಿಂಗಳೊಳಗಾಗಿ ಎಲ್ಲಾ 330 ಗ್ರಾಮ ಪಂಚಾಯತಿಗಳಲ್ಲಿ ಘನತ್ಯಾಜ್ಯ ನಿರ್ವಹಣೆ ಮಾಡಬೇಕೆಂದು ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​ ಈಶ್ವರಪ್ಪ ಸೂಚಿಸಿದರು.

Tumkur
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​ ಈಶ್ವರಪ್ಪ
author img

By

Published : Aug 19, 2021, 12:39 PM IST

ತುಮಕೂರು: ಸಿಕ್ಕಿರುವ ಅಧಿಕಾರವನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲ ಎಂದರೆ ನಾನು ಅಯೋಗ್ಯನಾಗುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​ ಈಶ್ವರಪ್ಪ ಹೇಳಿದರು.

ನಗರದ ಎಸ್ಐಟಿ ಕಾಲೇಜಿನ ಬಿರ್ಲಾ ಆಡಿಟೋರಿಯಂನಲ್ಲಿಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಮೈಸೂರಿನ ಅಬ್ದುಲ್ ನಜೀರ್​ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ, ಜಿಲ್ಲಾ ಪಂಚಾಯತಿಯ ಸಹಯೋಗದಲ್ಲಿ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗಾಗಿ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​ ಈಶ್ವರಪ್ಪ

ಜನರ ಆಶೀರ್ವಾದ ಇದ್ದರೆ ಮುಂದಿನ ದಿನಗಳಲ್ಲಿ ನೀವು ಇನ್ನೂ ಉತ್ತಮ ಮಟ್ಟಕ್ಕೆ ಬೆಳೆಯುತ್ತೀರಾ. ಚುನಾವಣೆಯಲ್ಲಿ ಜಿದ್ದುಗಳು ಸಹಜ. ಗೆದ್ದ ಮೇಲೆ ಐದು ವರ್ಷ ಜನರ ಋಣ ತೀರಿಸಿ. ಆಗ ಎಲ್ಲವೂ ಒಳ್ಳೆಯದಾಗುತ್ತದೆ ಎಂದರು.

ಜಿಲ್ಲೆಯಲ್ಲಿ 6 ತಿಂಗಳೊಳಗಾಗಿ ಎಲ್ಲಾ 330 ಗ್ರಾಮ ಪಂಚಾಯತಿಗಳಲ್ಲಿ ಘನತ್ಯಾಜ್ಯ ನಿರ್ವಹಣೆ ಮಾಡಬೇಕೆಂದು ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹೊಸದಾಗಿ ಆಯ್ಕೆಯಾಗಿರುವ ಗ್ರಾಮ ಪಂಚಾಯತಿ ಅಧ್ಯಕ್ಷರು ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆದ್ಯತೆ ನೀಡಬೇಕು. ಜೊತೆಗೆ ತ್ಯಾಜ್ಯ ನಿರ್ವಹಣೆ ಮಾಡಲು ಸೂಕ್ತ ಕಟ್ಟಡವನ್ನು ಗುರುತಿಸಬೇಕು ಎಂದು ನಿರ್ದೇಶನ ನೀಡಿದರು.

ದೇಶದ ಯಾವುದೇ ಉದ್ಯೋಗರಹಿತ ಪ್ರಜೆ ಉಪವಾಸವಿರಬಾರದೆಂದು ನರೇಗಾ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ಬಡವರಿಗೆ ಉದ್ಯೋಗ ನೀಡುವ ಮೂಲಕ ಆರ್ಥಿಕವಾಗಿ ಸಬಲರನ್ನಾಗಿ ಮಾಡಬೇಕು ಎಂದರು.

ಪ್ರತಿ ಹಳ್ಳಿಗಳಲ್ಲೂ ಬಯಲು ಶೌಚಾಲಯ ಮುಕ್ತಗೊಳಿಸಲು ವೈಯಕ್ತಿಕ ಶೌಚಾಲಯ ನಿರ್ಮಾಣ ಮಾಡಿಕೊಳ್ಳಲು ಗ್ರಾಮ ಪಂಚಾಯಿತಿಯ ಸದಸ್ಯರು/ಪಿಡಿಓಗಳು ಜನರಲ್ಲಿ ಅರಿವು ಮೂಡಿಸಬೇಕು. ವಿಶೇಷ ಘಟಕ ಯೋಜನೆಯಡಿ ಎಸ್​ಸಿ/ಎಸ್​ಟಿ ಸಮುದಾಯಗಳಿಗೆ ಶೌಚಾಲಯ ನಿರ್ಮಿಸಿಕೊಳ್ಳಲು ನೀಡಲಾಗುತ್ತಿದ್ದ 15 ಸಾವಿರ ರೂ.ಗಳ ಸಹಾಯಧನವನ್ನು 20 ಸಾವಿರ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ತಿಳಿಸಿದರು.

ಗ್ರಾ.ಪಂ. ಅಧ್ಯಕ್ಷರು, ಸದಸ್ಯರು ಪಕ್ಷಬೇಧ ಮರೆತು ತಮ್ಮ ಗ್ರಾಮದ ಕೆರೆಗಳನ್ನು ಅಭಿವೃದ್ಧಿಪಡಿಸಬೇಕು. ಗ್ರಾಮಪಂಚಾಯತಿಗಳಲ್ಲಿ ಪ್ರತಿವರ್ಷ ಹೊಸ ಯೋಜನೆಗಳನ್ನು ರೂಪಿಸಿ ಜನಪರ ಕೆಲಸಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.