ETV Bharat / state

ಸಾಲ-ಸೌಲಭ್ಯ ನೀಡುವಲ್ಲಿ ವಿಳಂಬವಾದ್ರೆ ಶಿಸ್ತು ಕ್ರಮ: ಅಧಿಕಾರಿಗಳಿಗೆ ಸಚಿವ ಮಾಧುಸ್ವಾಮಿ ಎಚ್ಚರಿಕೆ

ಸಾಲ-ಸೌಲಭ್ಯ ನೀಡುವಲ್ಲಿ ವಿಳಂಬವಾದ್ರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳಿಗೆ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಖಡಕ್​ ಎಚ್ಚರಿಕೆ ನೀಡಿದ್ದಾರೆ.

http://10.10.50.85:6060//finalout4/karnataka-nle/thumbnail/08-August-2021/12707586_724_12707586_1628383442484.png
ಸಚಿವ ಮಾಧುಸ್ವಾಮಿ ಎಚ್ಚರಿಕೆ
author img

By

Published : Aug 8, 2021, 6:49 AM IST

ತುಮಕೂರು : ಸರ್ಕಾರಿ ವಲಯದ ನಿಗಮ ಮಂಡಳಿ ಯೋಜನೆಯಡಿ ಫಲಾನುಭವಿಗಳಿಗೆ ಸಾಲ-ಸೌಲಭ್ಯವನ್ನು ನೀಡಲು ವಿಳಂಬ ಮಾಡಿದರೆ ಅಂತಹ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಬ್ಯಾಂಕ್‍ಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವಲ್ಲಿ ಬ್ಯಾಂಕ್ ವ್ಯವಸ್ಥಾಪಕರು ವಿಳಂಬ ಮಾಡುತ್ತಿರುವುದರಿಂದ ಪರಿಶಿಷ್ಟ ಜಾತಿ/ಪಂಗಡದ ಫಲಾನುಭವಿಗಳಿಗೆ ಅನ್ಯಾಯವಾಗುತ್ತಿದೆ. ಹಾಗಾಗಿ, ಸೌಲಭ್ಯ ಒದಗಿಸದ ವ್ಯವಸ್ಥಾಪಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಬ್ಯಾಂಕ್​ ಅಧಿಕಾರಿಗಳಿಗೆ ಸಚಿವ ಮಾಧುಸ್ವಾಮಿ ಎಚ್ಚರಿಕೆ

ನಿಗಮಗಳಿಂದ ಸೌಲಭ್ಯ ಪಡೆಯಲು ಆಯ್ಕೆಯಾದ ಫಲಾನುಭವಿಗಳಿಗೆ ಯೋಜನೆಯ ಫಲ ಸಮರ್ಪಕವಾಗಿ ದೊರೆಯುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿದ್ದು, ಬ್ಯಾಂಕ್‍ಗಳು ಫಲಾನುಭವಿಗಳನ್ನು ಅಲೆದಾಡಿಸದೆ ಸಾಲ-ಸೌಲಭ್ಯ ಒದಗಿಸಬೇಕು ಎಂದು ತಾಕೀತು ಮಾಡಿದರು.

ಜಿಲ್ಲೆಯಲ್ಲಿ ಒಟ್ಟು 49 ರಾಷ್ಟ್ರೀಕೃತ ಬ್ಯಾಂಕ್‍ಗಳ ಪೈಕಿ, ವಾರ್ಷಿಕ ಗುರಿ ನಿಗದಿಯಾಗದಿರುವ ಬ್ಯಾಂಕ್‍ಗಳನ್ನು ಸಾಲ ಒದಗಿಸುವ ಬ್ಯಾಂಕ್‍ಗಳ ಪಟ್ಟಿಯಿಂದ ಕೈ ಬಿಡಬೇಕು. ವಿವಿಧ ಇಲಾಖೆಗಳಡಿ ನೀಡಲಾಗುವ ಸಾಲ ಸೌಲಭ್ಯಗಳ ಬಗ್ಗೆ ಗ್ರಾಹಕರಿಗೆ ಅರಿವು ಮೂಡಿಸಬೇಕು. ಫಲಾನುಭವಿಗಳಿಗೆ ನಿಯಮಾನುಸಾರ ಸಾಲ ನೀಡಬೇಕು ಎಂದು ಜಿಲ್ಲಾ ಲೀಡ್ ಮ್ಯಾನೇಜರ್​​ಗೆ ಸಚಿವರು ಸೂಚಿಸಿದರು.

ಓದಿ : ರೋಗಿಗಳಿಂದ ಪಡೆದ ಹೆಚ್ಚುವರಿ ಹಣ ಹಿಂದಿರುಗಿಸಿ: ಖಾಸಗಿ ಆಸ್ಪತ್ರೆಗಳಿಗೆ ದ.ಕ DC ಸೂಚನೆ

ತೆಂಗು ಪುನಶ್ಚೇತನಕ್ಕೆ ಒತ್ತು ನೀಡುವ ಉದ್ದೇಶದಿಂದ ತೆಂಗು ಆಧಾರಿತ ಉತ್ಪನ್ನಗಳ ಕೈಗಾರಿಕೆಗಳಿಗೆ ಉತ್ತೇಜನ ನೀಡಬೇಕು. ಈ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆ ಮುಂದಾಗಬೇಕು. ಬ್ಯಾಂಕ್‍ಗಳು ಇಂತಹ ಕೈಗಾರಿಕೆಗಳಿಗೆ ಸಾಲ ಸೌಲಭ್ಯ ಒದಗಿಸಬೇಕು. ಆರ್ಥಿಕ ಸಂಕಷ್ಟದಲ್ಲಿರುವ ಕೈಗಾರಿಕೆಗಳಿಗೆ ಅಗತ್ಯವಿರುವ ಸಾಲ- ಸೌಲಭ್ಯ ನೆರವು ನೀಡಬೇಕು ಎಂದು ನಿರ್ದೇಶಿಸಿದರು.

ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮಾತನಾಡಿ, ಪರಿಶಿಷ್ಟ ಜಾತಿ/ವರ್ಗಗಳ ಫಲಾನುಭವಿಗಳಿಗೆ ಸಾಲ ಸೌಲಭ್ಯ ನೀಡಲು ವಿನಾ ಕಾರಣ ನಿರಾಕರಿಸಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ನಿಗದಿತ ಸಮಯದೊಳಗೆ ಫಲಾನುಭವಿಗಳಿಗೆ ಸಾಲ ಮಂಜೂರು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಮಾಧುಸ್ವಾಮಿ, ಜಿಲ್ಲೆಯಲ್ಲಿ ಕೈಗೊಂಡಿರುವ ನೀರಾವರಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು. ವಿವಿಧ ನೀರಾವರಿ ಯೋಜನೆಗಳಡಿ ನೀರು ಹಂಚಿಕೆ ಮಾಡಿರುವ ಜಿಲ್ಲೆಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಜಿಲ್ಲೆಯಲ್ಲಿ ಕೈಗೊಂಡಿರುವ ತುಮಕೂರು-ರಾಯದುರ್ಗ ರೈಲ್ವೆ ಕಾಮಗಾರಿ ಹಾಗೂ ಎತ್ತಿನಹೊಳೆ ಕಾಮಗಾರಿಗಳು ಪ್ರಗತಿಯಲ್ಲಿವೆ. ಕೊರಟಗೆರೆ ತಾಲೂಕಿನ ನಬೈರಗೊಂಡ್ಲು ಭಾಗದಲ್ಲಿ ಭೂಸ್ವಾಧೀನಕ್ಕೊಳಪಟ್ಟ ರೈತರಿಗೆ ಸೂಕ್ತ ಪರಿಹಾರ ನೀಡುವುದಾಗಿ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.