ತುಮಕೂರು: ಸಚಿವ ಸಂಪುಟ ಸಭೆಯಲ್ಲಿ 7ನೇ ತರಗತಿಯವರೆಗೂ ಆನ್ಲೈನ್ ಶಿಕ್ಷಣವನ್ನು ರದ್ದುಪಡಿಸಬೇಕು ಎಂಬ ಮನವಿಯನ್ನು ಮಾಡಿದ್ದೇನೇ ಹೊರೆತು ಇದು ಸರ್ಕಾರದ ನಿರ್ಧಾರವಲ್ಲ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ತುಮಕೂರಿನಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಏಳನೇ ತರಗತಿಯವರೆಗೂ ಆನ್ಲೈನ್ ಶಿಕ್ಷಣವನ್ನು ರದ್ದುಪಡಿಸುವ ನಿರ್ಧಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಇದು ಸಹಕಾರಿಯಾಗುತ್ತದೆ. ಇದೇ ವಿಷಯವನ್ನು ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿರುವುದಾಗಿ ತಿಳಿಸಿದರು.
ಎಲ್ಕೆಜಿ, ಯುಕೆಜಿಯಿಂದ 5ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣ ನೀಡುವುದಿಲ್ಲ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದರು. ಈ ಹೇಳಿಕೆ ಕುರಿತು ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ.