ETV Bharat / state

ಚಿಕ್ಕನಾಯಕನಹಳ್ಳಿ ಕ್ಷೇತ್ರಕ್ಕೆ ಸಿದ್ದರಾಮಯ್ಯ ಬಂದ್ರೆ ಸ್ವಾಗತಿಸುತ್ತೇನೆ : ಸಚಿವ ಮಾಧುಸ್ವಾಮಿ

ಕೋಲಾರ ಸಿದ್ದರಾಮಯ್ಯ ಅವರಿಗೆ ಸ್ಪರ್ಧಿಸಲು ಸೂಕ್ತ ಅಲ್ಲ. ಸಿದ್ದರಾಮಯ್ಯ ಅವರು ಚಿಕ್ಕನಾಯಕನಹಳ್ಳಿ ಕ್ಷೇತ್ರಕ್ಕೆ ಬಂದ್ರೆ ಸ್ವಾಗತಿಸುತ್ತೇನೆ ಎಂದು ಸಚಿವ ಮಾಧುಸ್ವಾಮಿ ಹೇಳಿದರು.

minister-madhuswamy-welcomes-siddaramaiah-for-election-in-own-constiuency
ಚಿಕ್ಕನಾಯಕನಹಳ್ಳಿ ಕ್ಷೇತ್ರಕ್ಕೆ ಸಿದ್ದರಾಮಯ್ಯ ಬಂದ್ರೆ ಸ್ವಾಗತಿಸುತ್ತೇನೆ : ಸಚಿವ ಮಾಧುಸ್ವಾಮಿ
author img

By

Published : Nov 13, 2022, 7:53 PM IST

Updated : Nov 13, 2022, 8:09 PM IST

ತುಮಕೂರು : ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಯಾಕೆ ಸ್ಪರ್ಧಿಸುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಚಿಕ್ಕನಾಯಕನಹಳ್ಳಿ ಕ್ಷೇತ್ರಕ್ಕೆ ಬಂದ್ರೆ ಸ್ವಾಗತಿಸುತ್ತೇನೆ ಎಂದು ಸಚಿವ ಮಾಧುಸ್ವಾಮಿ ಹೇಳಿದರು.

ಯಡಿಯೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಿಕ್ಕನಾಯಕನಹಳ್ಳಿ ಕ್ಷೇತ್ರಕ್ಕೆ ಸಿದ್ದರಾಮಯ್ಯ ಬಂದ್ರೆ ಕುಸ್ತಿನಾದ್ರೂ ಆಡಬಹುದು. ಅವರಿಗೆ ತವರಿಂದ ಗೆಲ್ಲುವುದು ಕಷ್ಟ ಎಂದು ಹಿಂದಿನ ಚುನಾವಣೆಯಿಂದ ಗೊತ್ತಾಗಿದೆ. ಹಾಗಾಗಿ ಅಲ್ಲಿಂದ ಮತ್ತೊಮ್ಮೆ ಸ್ಪರ್ಧಿಸಲಾರರು ಎಂದುಕೊಂಡಿದ್ಧೇನೆ. ಅದಲ್ಲದೆ ಕೋಲಾರ ಕೂಡ ಸಿದ್ದರಾಮಯ್ಯ ಅವರಿಗೆ ಸ್ಪರ್ಧಿಸಲು ಸೂಕ್ತ ಅಲ್ಲ ಎಂದು ಅಭಿಪ್ರಾಯಪಟ್ಟರು.

ಚಿಕ್ಕನಾಯಕನಹಳ್ಳಿ ಕ್ಷೇತ್ರಕ್ಕೆ ಸಿದ್ದರಾಮಯ್ಯ ಬಂದ್ರೆ ಸ್ವಾಗತಿಸುತ್ತೇನೆ : ಸಚಿವ ಮಾಧುಸ್ವಾಮಿ

ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್​ ಡಿ ದೇವೇಗೌಡರನ್ನು ಆಹ್ವಾನಿಸದ ವಿಚಾರವಾಗಿ ಮಾತನಾಡಿದ ಅವರು, ದೇವೇಗೌಡರನ್ನು ಆಹ್ವಾನಿಸಲಾಗಿತ್ತು. ಅದನ್ನು ಅವರು ಒಪ್ಪಿಕೊಂಡಿದ್ದರು. ಮುಖ್ಯಮಂತ್ರಿಗಳೇ ಅವರನ್ನು ಆಹ್ವಾನಿಸಿದ್ದರು. ಈ ರೀತಿ ವ್ಯತಿರಿಕ್ತವಾಗಿ ಪ್ರಚಾರ ಮಾಡಿದರೆ ನಾವೇನು ಮಾಡುವುದಕ್ಕೆ ಆಗಲ್ಲ ಎಂದು ತಿಳಿಸಿದರು.

ವಿಗ್ರಹರಾಧಾನೆಯನ್ನು ಮುಸ್ಲಿಂ ಸಮುದಾಯ ಒಪ್ಪಲ್ಲ : ಟಿಪ್ಪು ಪ್ರತಿಮೆ ನಿರ್ಮಿಸುವುದನ್ನು ಇಸ್ಲಾಂ ಧರ್ಮದವರೂ ಸಹ ಒಪ್ಪಲ್ಲ. ಅಂತಹ ದುಸ್ಸಾಹಸಕ್ಕೆ ಅವರು ಕೈ ಹಾಕುತ್ತಿದ್ದಾರೆ. ಸಾರ್ವಜನಿಕವಾಗಿ ವಿಗ್ರಹರಾಧಾನೆಯನ್ನು ಮುಸ್ಲಿಂ ಸಮುದಾಯ ಒಪ್ಪಲ್ಲ ಎಂದು ಹೇಳಿದರು.

ಇದನ್ನೂ ಓದಿ : ಗೊಂದಲಗಳಿಲ್ಲದೆ ತಳವಾರ ಸಮುದಾಯಕ್ಕೆ ಎಸ್​ಟಿ ಪ್ರಮಾಣಪತ್ರ ನೀಡಿ: ಸಚಿವ ಶ್ರೀನಿವಾಸ್ ಪೂಜಾರಿ

Last Updated : Nov 13, 2022, 8:09 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.