ETV Bharat / state

ಕೋವಿಡ್ ನಿಯಂತ್ರಣಕ್ಕೆ ತುಮಕೂರು ಜಿಲ್ಲೆಯಲ್ಲಿ ಸಕಲ ಸಿದ್ಧತೆ : ಸಚಿವ ಮಾಧುಸ್ವಾಮಿ - ತುಮಕೂರು ಕೆಡಿಪಿ ಸಭೆ

ತುಮಕೂರಿನಲ್ಲಿ ಕೆಡಿಪಿ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಕೋವಿಡ್ ಎದುರಿಸಲು ಮಾಡಿಕೊಂಡಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು.

Minister Maduswamy held KDP meeting at Thumk
ಕೆಡಿಪಿ ಸಭೆ ನಡೆಸಿದ ಸಚಿವ ಮಾಧುಸ್ವಾಮಿ
author img

By

Published : Apr 18, 2021, 7:29 AM IST

ತುಮಕೂರು : ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಸರ್ಕಾರದ ಮಾರ್ಗಸೂಚಿಯಂತೆ ಕ್ರಮ ಕೈಗೊಂಡಿದ್ದು, ಸಮರ್ಪಕ ಹಾಸಿಗೆ, ಐಸಿಯು ವ್ಯವಸ್ಥೆ ಮತ್ತು ಲಸಿಕೆ ವಿತರಣೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.

ಜಿಲ್ಲಾ ಪಂಚಾಯತ್​ ಸಭಾಂಗಣದಲ್ಲಿ ಶನಿವಾರ ನಡೆದ 2020-21ನೇ ಸಾಲಿನ 4ನೇ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಪೂರೈಕೆ ಸಮರ್ಪಕವಾಗಿದೆ. ಪ್ರಸ್ತುತ ಲಸಿಕೆ, ಹಾಸಿಗೆಗಳ ಕೊರತೆಯಿಲ್ಲ. ಕೋವಿಡ್ ತಡೆಗೆ ಮನೆ-ಮನೆ ಸರ್ವೆ ಕಾರ್ಯವನ್ನೂ ಮಾಡಲಾಗುತ್ತಿದೆ. ರೋಗ ಲಕ್ಷಣ ಕಂಡು ಬಂದಲ್ಲಿ ಅಂತವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿ, ಪಾಸಿಟಿವ್ ಬಂದರೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಬೇಕು. ವೈದ್ಯರ ಸಲಹಾ ಚೀಟಿಯಿಲ್ಲದೆ ಮೆಡಿಕಲ್‍ಗಳಲ್ಲಿ ಔಷಧಗಳನ್ನು ನೀಡಬಾರದು. ವಯಸ್ಸಾದವರನ್ನು ಹೆಚ್ಚು ಪರೀಕ್ಷೆಗೆ ಒಳಪಡಿಸಬೇಕು. ವಿವಿಧ ರೋಗಗಳಿಂದ ಆಸ್ಪತ್ರೆಗೆ ದಾಖಲಾಗುವ ರೋಗಿಗಳನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಿ, ಬಳಿಕ ದಾಖಲು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಓದಿ : ತುಮಕೂರು ಜಿಲ್ಲಾಸ್ಪತ್ರೆಗೆ ಡಿಸಿ ವೈ ಎಸ್ ಪಾಟೀಲ್ ಭೇಟಿ, ವೈದ್ಯರ ಜತೆಗೆ ಸಭೆ

ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಮಾತನಾಡಿ, ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಯಲ್ಲಿ 200 ಹಾಸಿಗೆ, 21 ಐಸಿಯು ಹಾಗೂ ಎಲ್ಲಾ ತಾಲೂಕುಗಳಲ್ಲಿಯೂ ಆಮ್ಲಜನಕ ಸಹಿತ 50 ಹಾಸಿಗೆ ವ್ಯವಸ್ಥೆಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ತುಮಕೂರಿನ ಎರಡು ಮೆಡಿಕಲ್ ಕಾಲೇಜುಗಳು ಸರ್ಕಾರದ ನಿರ್ದೇಶನದಂತೆ ಕೋವಿಡ್‍ಗಾಗಿ ಶೇ.50ರಷ್ಟು ಹಾಸಿಗೆ ಮೀಸಲಿರಿಸಲು ಒಪ್ಪಿಗೆ ನೀಡಿದೆ. ಕೋವಿಡ್ ಸೋಂಕಿತರು ಅಲ್ಲಿಯೂ ದಾಖಲಾಗಬಹುದು. ಉಳಿದಂತೆ ಭಾರತೀಯ ವೈದ್ಯಕೀಯ ಸಂಘದಡಿಯ ಖಾಸಗಿ ಆಸ್ಪತ್ರೆಗಳಲ್ಲಿಯೂ ಶೇ.50ರಷ್ಟು ಹಾಸಿಗೆ ಮೀಸಲಿಡಲು ಒಪ್ಪಿಗೆ ನೀಡಿದ್ದಾರೆ. ಜಿಲ್ಲೆಯಲ್ಲಿ ಸದ್ಯಕ್ಕೆ ಆಮ್ಲಜನಕದ ಸಮಸ್ಯೆಯಿಲ್ಲ. ಮೊದಲು ಸರ್ಕಾರಿ ಲ್ಯಾಬ್‍ಗಳಲ್ಲಿ ಮಾತ್ರ ಕೋವಿಡ್ ಪರೀಕ್ಷೆ ಮಾಡಲು ಅವಕಾಶವಿತ್ತು. ಆದರೆ, ಈಗ ಖಾಸಗಿ ಆಸ್ಪತ್ರೆಗಳ ಲ್ಯಾಬ್​ಗಳಲ್ಲಿಯೂ ಪರೀಕ್ಷೆ ಮಾಡಲು ಅವಕಾಶ ಕಲ್ಪಿಸಿರುವುದರಿಂದ ಹೆಚ್ಚು ಪರೀಕ್ಷೆ ಮಾಡಲು ಅನುಕೂಲವಾಗಲಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.