ತುಮಕೂರು: ನಗರದ ಹೃದಯ ಭಾಗದಲ್ಲಿರುವ ಸರ್ಕಾರಿ ಜೂನಿಯರ್ ಕಾಲೇಜ್ ಮತ್ತು ಪ್ರೌಢ ಶಾಲೆಯಲ್ಲಿ ಕಿಡಿಗೇಡಿಗಳ ಹಾವಳಿ ಹೆಚ್ಚಾಗಿದೆ. ಈ ಕಾಲೇಜಿನ ಹಾಗೂ ಪ್ರೌಢ ಶಾಲೆಯ ಆವರಣದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕೆಲಸ ಮಾಡಿದರೂ ಅದನ್ನು ಹಾಳುಗೆಡವುತ್ತಿದ್ದಾರೆ.
ಹೌದು, ಸ್ವಾತಂತ್ರ್ಯ ಪೂರ್ವದಿಂದಲೂ ಇರುವ ಸರ್ಕಾರಿ ಶಾಲಾ ಕಟ್ಟಡದ ಸುತ್ತಲೂ ಎಷ್ಟೇ ವಿದ್ಯುತ್ ದೀಪಗಳನ್ನು ಅಳವಡಿಸಿದರೂ ಪ್ರಯೋಜನಕ್ಕೆ ಬಾರದಂತಾಗಿದೆ. ರಾತ್ರಿ ಹೊತ್ತಲ್ಲಿ ಕಟ್ಟಡದ ಕಿಟಕಿ ಗಾಜುಗಳನ್ನು, ವಿದ್ಯುತ್ ದೀಪಗಳನ್ನು ಒಡೆದು ಹಾಕುತ್ತಿದ್ದಾರೆ.
ಮಕ್ಕಳ ಉಜ್ವಲ ಭವಿಷ್ಯ ನಿರ್ಮಿಸುವ ವಿದ್ಯಾಸಂಸ್ಥೆಯ ಕಟ್ಟಡ ಈಗ ಕಿಡಿಗೇಡಿಗಳ ಅಡ್ಡವಾಗಿದ್ದು, ಸಂಬಂಧಿತರು ಈ ಬಗ್ಗೆ ಗಮನ ಹರಿಸಬೇಕಿದೆ.