ETV Bharat / state

ಬಿಜೆಪಿ ಸರ್ಕಾರದ ಆಯಸ್ಸು 2 ತಿಂಗಳು: ಶಾಸಕ ಗೌರಿಶಂಕರ್ ಭವಿಷ್ಯ

ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರನ್ನು ಸೃಷ್ಟಿಮಾಡಿ ಅವರನ್ನು ಮೇಲೆತ್ತುವ ಕೆಲಸವನ್ನು ಮಾಜಿ ಪ್ರಧಾನಿ ದೇವೇಗೌಡರು ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲೆಯ ಕಾರ್ಯಕರ್ತರ ಅಭಿಪ್ರಾಯದ ಮೇರೆಗೆ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ಆರ್.ಸಿ ಆಂಜನಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ ಗೌರಿಶಂಕರ್ ತಿಳಿಸಿದರು.

ಶಾಸಕ ಗೌರಿಶಂಕರ್ ಭವಿಷ್ಯ
author img

By

Published : Aug 29, 2019, 5:15 AM IST

ತುಮಕೂರು: ಬಿಜೆಪಿ ಸರ್ಕಾರ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಿಸಿ ಇತಿಹಾಸ ಸೃಷ್ಟಿಸಿದೆ. ಅವರು ರಾಜಕೀಯ ಮಾಡುವುದನ್ನು ಬಿಟ್ಟು ಮೊದಲು ಪ್ರವಾಹದಿಂದ ಪರದಾಡುತ್ತಿರುವ ಜನರಿಗೆ ಸಹಾಯ ಮಾಡಲಿ. ಇವರ ಸರ್ಕಾರದ ಆಯಸ್ಸು ಎರಡು ತಿಂಗಳು ಎಂದು ಶಾಸಕ ಡಿ.ಸಿ ಗೌರಿಶಂಕರ್ ಭವಿಷ್ಯ ನುಡಿದರು.

ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರನ್ನು ಸೃಷ್ಟಿಮಾಡಿ ಅವರನ್ನು ಮೇಲೆತ್ತುವ ಕೆಲಸವನ್ನು ಮಾಜಿ ಪ್ರಧಾನಿ ದೇವೇಗೌಡರು ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲೆಯ ಕಾರ್ಯಕರ್ತರ ಅಭಿಪ್ರಾಯದ ಮೇರೆಗೆ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ಆರ್.ಸಿ ಆಂಜನಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದರು.

ಕುಡಿಯಲು ಹಾಗೂ ತಮ್ಮ ಬೆಳೆಗಳಿಗೆ ರೈತರು ನೀರು ಕೇಳುತ್ತಿದ್ದಾರೆ. ಅದರಲ್ಲಿ ಯಾವುದೇ ತಪ್ಪಿಲ್ಲ. ಈ ಹಿಂದೆ ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ 8 ತಾಲೂಕಿನ ಎಲ್ಲಾ ಕೆರೆಗಳಿಗೆ ಹೇಮಾವತಿ ಹರಿಸುತ್ತೇನೆ ಎಂದು ಬಿಜೆಪಿ ಸಂಸದ ಜಿ.ಎಸ್.ಬಸವರಾಜು ಹೇಳಿದ್ದರು. ಈಗ ಎಲ್ಲಾ ಕೆರೆಗಳನ್ನು ತುಂಬಿಸಿ ಜೊತೆಗೆ ಬಿಜೆಪಿಯ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು ಕೆರೆಗಳಿಗೆ ನೀರನ್ನು ಬಿಡುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಡಲಿ ಎಂದು ಆಗ್ರಹಿಸಿದರು.

ಮಾಜಿ ಶಾಸಕ ಸುರೇಶ್ ಗೌಡ ಅವರು ಆರೋಪ ಮಾಡುತ್ತಿರುವುದಕ್ಕೆ ಯಾವುದೇ ದಾಖಲೆಗಳಿಲ್ಲ. ಅವರದ್ದು ಹಿಟ್ ಅಂಡ್ ರನ್ ಪದ್ಧತಿ. ಕೇವಲ ಕಾಲೆಳೆಯಲು ಆರೋಪ ಮಾಡುತ್ತಿದ್ದಾರೆ. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಅವರೊಬ್ಬ ರಿಜೆಕ್ಟೆಡ್ ಪೀಸ್. ಶಾಸಕ ಸ್ಥಾನಕ್ಕೆ ಅನ್ಫಿಟ್ ಎಂದು ವಾಗ್ದಾಳಿ ನಡೆಸಿದರು.

ತುಮಕೂರು: ಜೆಡಿಎಸ್​ ನೂತನ ಜಿಲ್ಲಾ ಅಧ್ಯಕ್ಷರ ನೇಮಕ

ಪಕ್ಷ ಸಂಘಟನೆ ಮೊದಲ ಆದ್ಯತೆ : ಸಿ.ಆರ್ ಆಂಜನಪ್ಪ

ಇದೇ ವೇಳೆ ಮಾತನಾಡಿದ ಸಂಸದ ನೂತನ ಜಿಲ್ಲಾಧ್ಯಕ್ಷ ಸಿ.ಆರ್ ಆಂಜನಪ್ಪ, ಮುಂದಿನ ದಿನಗಳಲ್ಲಿ ವಿಧಾನಸಭಾ ಚುನಾವಣೆಯ ವೇಳೆಗೆ ಪಕ್ಷವನ್ನು ಸಂಘಟನೆ ಮಾಡಿ, ಜಿಲ್ಲೆಯ 11 ತಾಲೂಕುಗಳಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಜಯಶೀಲರನ್ನಾಗಿಸುವ ಕೆಲಸ ಮಾಡಲು ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಜೆಡಿಎಸ್ ಪ್ರಬಲ ಪಕ್ಷವಾಗಿದೆ. ಸಣ್ಣ ಸಮಸ್ಯೆಯಿಂದ ಒಡಕು ಉಂಟಾಗಿತ್ತು. ಅದನ್ನು ಬಗೆಹರಿಸಿಕೊಂಡು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಂಡು ಪಕ್ಷವನ್ನು ಸಂಘಟಿಸಲಾಗುವುದು. ಇದಕ್ಕೆ ರಾಜ್ಯ ಹಾಗೂ ಜಿಲ್ಲೆಯ ನಾಯಕರು ನಮಗೆ ಬೆಂಬಲ ನೀಡಲಿದ್ದಾರೆ. ಜಿಲ್ಲೆಯ ಎಲ್ಲಾ ತಾಲೂಕು ಘಟಕಗಳನ್ನು ಪುನಾರಚನೆ ಮಾಡಿ, ಪಕ್ಷವನ್ನು ಸಂಘಟಿಸಲಾಗುವುದು. ರಾಜ್ಯ ನಾಯಕರ ಆದೇಶದಂತೆ ಜಿಲ್ಲೆಯಲ್ಲಿ ಪಕ್ಷವನ್ನ ಬಲ ಪಡಿಸುವಲ್ಲಿ ಕಾರ್ಯಪ್ರವೃತ್ತರಾಗಿದ್ದೇವೆ ಎಂದರು.

ರಾಜಕಾರಣದ ಪರಿಸ್ಥಿತಿ ಹದಗೆಟ್ಟಿದೆ : ಮಾಜಿ ಶಾಸಕ ಎಂ.ಟಿ ಕೃಷ್ಣಪ್ಪ

ಈಗಿನ ರಾಜಕಾರಣದ ಪರಿಸ್ಥಿತಿ ಹದಗೆಟ್ಟಿದೆ. ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲೂಕಾ ಮಟ್ಟದಲ್ಲಿ ಜೆಡಿಎಸ್ ಪಕ್ಷವನ್ನು ಇನ್ನಷ್ಟು ಬಲಗೊಳಿಸಲು ವರಿಷ್ಠರು ಕಾರ್ಯಪ್ರವೃತ್ತರಾಗಿರುತ್ತಾರೆ. ಬಿಜೆಪಿ ಸರ್ಕಾರವು 105 ಸದಸ್ಯರಿಂದ ರಚಿತವಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್​ನಿಂದ ಹೊರಬಂದ ಅತೃಪ್ತ ಶಾಸಕರಿಂದ ಸರ್ಕಾರ ರಚನೆಯಾಗಿದೆ ಎಂದು ಮಾಜಿ ಶಾಸಕ ಎಂ.ಟಿ ಕೃಷ್ಣಪ್ಪ ಹೇಳಿದರು.

ನೀರಿನ ವಿಚಾರಕ್ಕೆ ನನ್ನ ಮೇಲೆ ಎಫ್ಐಆರ್ ಹಾಕಿರುವುದು ಸಂತೋಷದ ವಿಚಾರ. ರೈತರ ಪರವಾಗಿ ಹೋರಾಡುತ್ತೇನೆ ಎಂದು ಮಾಜಿ ಶಾಸಕ ಎಂ.ಟಿ ಕೃಷ್ಣಪ್ಪ ತಿಳಿಸಿದರು.

Intro:ತುಮಕೂರು: ಮುಂದಿನ ದಿನಗಳಲ್ಲಿ ವಿಧಾನಸಭಾ ಚುನಾವಣೆಯ ವೇಳೆಗೆ ಪಕ್ಷವನ್ನು ಸಂಘಟನೆ ಮಾಡಿ, ಜಿಲ್ಲೆಯ 11 ತಾಲೂಕುಗಳಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಜಯಶೀಲರನ್ನಾಗಿಸುವ ಕೆಲಸ ಮಾಡಲು ಮೊದಲ ಆದ್ಯತೆ ನೀಡಲಾಗುವುದು ಎಂದು ನೂತನ ಜಿಲ್ಲಾಧ್ಯಕ್ಷ ಸಿ.ಆರ್ ಆಂಜನಪ್ಪ ತಿಳಿಸಿದರು.

Body:ನಗರದ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಜೆಡಿಎಸ್ ಪ್ರಬಲ ಪಕ್ಷವಾಗಿದೆ. ಸಣ್ಣ ಸಮಸ್ಯೆಯಿಂದ ಒಡಕು ಉಂಟಾಗಿತ್ತು, ಅದನ್ನು ಬಗೆಹರಿಸಿಕೊಂಡು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಂಡು ಪಕ್ಷವನ್ನು ಸಂಘಟಿಸಲಾಗುವುದು. ಇದಕ್ಕೆ ರಾಜ್ಯ ಹಾಗೂ ಜಿಲ್ಲೆಯ ನಾಯಕರು ನಮಗೆ ಬೆಂಬಲ ನೀಡಲಿದ್ದಾರೆ.
ಜಿಲ್ಲೆಯ ಎಲ್ಲಾ ತಾಲೂಕುಗಳ ಘಟಕಗಳನ್ನು ಪುನರ್ ರಚನೆ ಮಾಡಿ, ಪಕ್ಷವನ್ನು ಸಂಘಟಿಸಲಾಗುವುದು, ರಾಜ್ಯ ನಾಯಕರ ಆದೇಶದಂತೆ ಜಿಲ್ಲೆಯಲ್ಲಿ ಪಕ್ಷವನ್ನ ಬಲ ಪಡಿಸುವಲ್ಲಿ ಕಾರ್ಯಪ್ರವೃತ್ತರಾಗಿದ್ದೇವೆ ಎಂದರು.
ಬೈಟ್: ಸಿ.ಆರ್ ಆಂಜನಪ್ಪ, ನೂತನ ಜಿಲ್ಲಾಧ್ಯಕ್ಷ
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ ಗೌರಿಶಂಕರ್, ಬಿಜೆಪಿ ಸರ್ಕಾರ ಮೂವರು ಉಪಮುಖ್ಯಮಂತ್ರಿಗಳನ್ನು ಮಾಡಿ ಇತಿಹಾಸ ಸೃಷ್ಟಿಸಿದ್ದಾರೆ. ಅವರು ರಾಜಕೀಯ ಮಾಡುವುದನ್ನು ಬಿಟ್ಟು ಮೊದಲು ಪ್ರವಾಹದಿಂದ ಪರದಾಡುತ್ತಿರುವ ಜನರಿಗೆ ಸಹಾಯ ನೀಡಲಿ, ಇವರ ಸರ್ಕಾರ ಎರಡು ತಿಂಗಳು ಉಳಿಯಲಿದೆ ಎಂದು ಭವಿಷ್ಯ ನುಡಿದರು.
ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರನ್ನು ಸೃಷ್ಟಿಮಾಡಿ ಅವರನ್ನು ಮೇಲೆತ್ತುವ ಕೆಲಸವನ್ನು ಮಾಜಿ ಪ್ರಧಾನಿ ದೇವೇಗೌಡರು ಮಾಡುತ್ತಿದ್ದಾರೆ, ಈ ನಿಟ್ಟಿನಲ್ಲಿ ಜಿಲ್ಲೆಯ ಕಾರ್ಯಕರ್ತರ ಅಭಿಪ್ರಾಯದ ಮೇರೆಗೆ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ಆರ್.ಸಿ ಆಂಜನಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದರು.
ರೈತರು ಕುಡಿಯಲು ಹಾಗೂ ತಮ್ಮ ಬೆಳೆಗಳಿಗೆ ನೀರು ಕೇಳುತ್ತಿದ್ದಾರೆ, ಅದರಲ್ಲಿ ಯಾವುದೇ ತಪ್ಪಿಲ್ಲ. ಈ ಹಿಂದೆ ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ ಎಂಟು ತಾಲೂಕಿನ ಎಲ್ಲಾ ಕೆರೆಗಳಿಗೆ ಹೇಮಾವತಿ ಹರಿಸುತ್ತೇನೆ ಎಂದು ಈಗಿನ ಸಂಸದ ಬಿಜೆಪಿಯ ಜಿ.ಎಸ್ ಬಸವರಾಜು ಹೇಳಿದ್ದರು, ಈಗ ಎಲ್ಲಾ ಕೆರೆಗಳನ್ನು ತುಂಬಿಸಿ ಜೊತೆಗೆ ಬಿಜೆಪಿಯ ಸಚಿವರಾದ ಜೆ.ಸಿ ಮಾಧುಸ್ವಾಮಿ ಯವರು ಕೆರೆಗಳಿಗೆ ನೀರನ್ನು ಬಿಡುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಡಲಿ ಎಂದರು.
ಮಾಜಿ ಶಾಸಕ ಸುರೇಶ್ ಗೌಡ ಅವರು ಆರೋಪ ಮಾಡುತ್ತಿರುವುದಕ್ಕೆ ಯಾವುದೇ ದಾಖಲೆಗಳಿಲ್ಲ, ಅವರದ್ದು ಹಿಟ್ ಅಂಡ್ ರನ್ ಪದ್ಧತಿ ಕೇವಲ ಕಾಲೆಳೆಯಲು ಆರೋಪ ಮಾಡುತ್ತಿದ್ದಾರೆ. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಅವರೊಬ್ಬ ರೇಜೆಕ್ಟೆಡ್ ಪೀಸ್, ಶಾಸಕ ಸ್ಥಾನಕ್ಕೆ ಅನ್ಫಿಟ್ ಎಂದು ವಾಗ್ದಾಳಿ ನಡೆಸಿದರು.
ಬೈಟ್: ಡಿ.ಸಿ ಗೌರಿಶಂಕರ್, ಗ್ರಾಮಾಂತರ ಶಾಸಕ
ಈಗಿನ ರಾಜಕಾರಣದ ಪರಿಸ್ಥಿತಿ ಹದಗೆಟ್ಟಿದೆ, ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಜೆಡಿಎಸ್ ಪಕ್ಷವನ್ನು ಇನ್ನಷ್ಟು ಬಲಗೊಳಿಸಲು ಪಕ್ಷದ ಬೆಳವಣಿಗೆಗೆ ವರಿಷ್ಠರು ಯಾವಾಗಲೂ ಕಾರ್ಯಪ್ರವೃತ್ತರಾಗಿ ಇರುತ್ತಾರೆ. ಬಿಜೆಪಿ ಸರ್ಕಾರವು 105 ಸದಸ್ಯರಿಂದ ರಚಿತವಾಗಿದ್ದು ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಹೊರಬಂದ ಅತೃಪ್ತರ ಶಾಸಕರಿಂದ ಸರ್ಕಾರ ರಚನೆಯಾಗಿದೆ ಎಂದರು.
ನೀರಿನ ವಿಚಾರಕ್ಕೆ ನನ್ನ ಮೇಲೆ ಎಫ್ಐಆರ್ ಹಾಕಿರುವುದು ಸಂತೋಷದ ವಿಚಾರ ರೈತರಪರ ಹೊರಡುವೆನು ಎಂದು ಮಾಜಿ ಶಾಸಕ ಎಂ.ಟಿ ಕೃಷ್ಣಪ್ಪ ತಿಳಿಸಿದರು.
ಬೈಟ್: ಎಂ.ಟಿ. ಕೃಷ್ಣಪ್ಪ, ಮಾಜಿ ಶಾಸಕ

Conclusion:ಇದಕ್ಕೂ ಮುನ್ನ ನೂತನ ಅಧ್ಯಕ್ಷ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಹಾಲಿ ಶಾಸಕರಾದ ಎಂ.ವಿ ವೀರಭದ್ರಯ್ಯ, ಸತ್ಯನಾರಾಯಣ, ಮಾಜಿ ಶಾಸಕರಾದ ಸುಧಾಕರ್ ಲಾಲ್, ತಿಮ್ಮರಾಯಪ್ಪ ಸೇರಿದಂತೆ ಜನಪ್ರತಿನಿಧಿಗಳು ಭಾಗವಹಿಸಿದ್ದರು.

ವರದಿ
ಸುಧಾಕರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.