ETV Bharat / state

ಚೆಲುವರಾಯಸ್ವಾಮಿಗೆ ಮಾಡಲು ಕೆಲಸವಿಲ್ಲದೆ ಹೆಚ್​ಡಿಕೆ ವಿರುದ್ಧ ಹೇಳಿಕೆ ನೀಡ್ತಿದ್ದಾರೆ: ಶಾಸಕ ಗೌರಿಶಂಕರ್

ಮಾಜಿ ಸಚಿವ ಚೆಲುವರಾಯಸ್ವಾಮಿಗೆ ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಮಾತನಾಡುವ ತಾಕತ್ತು ಇಲ್ಲ. ಹಾಗಾಗಿ, ಹೆಚ್​.ಡಿ. ಕುಮಾರಸ್ವಾಮಿ ಅವರ ಬಗ್ಗೆ ಹೇಳಿಕೆ ನೀಡುವುದನ್ನು ರೂಢಿಸಿಕೊಂಡಿದ್ದಾರೆ ಎಂದು ಶಾಸಕ ಗೌರಿಶಂಕರ್ ವಾಗ್ದಾಳಿ ನಡೆಸಿದ್ದಾರೆ.

ಶಾಸಕ ಗೌರಿಶಂಕರ್
author img

By

Published : Sep 16, 2019, 7:29 PM IST

ತುಮಕೂರು: ಮಾಜಿ ಶಾಸಕ ಚೆಲುವರಾಯಸ್ವಾಮಿ ಅವರಿಗೆ ಮಾಡಲು ಕೆಲಸವಿಲ್ಲ. ಅದಕ್ಕೆ ಅವಕಾಶ ಸಿಕ್ಕಾಗಲೆಲ್ಲ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಅವರ ವಿರುದ್ಧ ಹೇಳಿಕೆ ನೀಡುವ ಮೂಲಕ ಬಾಯ್ಚಟ ತೀರಿಸಿಕೊಳ್ಳುತ್ತಿದ್ದಾರೆ ಎಂದು ತುಮಕೂರು ಗ್ರಾಮಾಂತರ ಶಾಸಕ ಡಿ. ಸಿ. ಗೌರಿಶಂಕರ್ ಹರಿಹಾಯ್ದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಗೌರಿಶಂಕರ್

ತಮ್ಮ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಿದ್ಧಗಂಗಾ ಮಠಕ್ಕೆ ಆಗಮಿಸಿ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದರು. 2013ರ ವಿಧಾನಸಭಾ ಚುನಾವಣೆಯಲ್ಲಿ ಚೆನ್ನಿಗಪ್ಪ ಹಾಗೂ ನಾನು ಸೋಲಲು ಚೆಲುವರಾಯಸ್ವಾಮಿ ಅವರೇ ಕಾರಣರಾಗಿದ್ದರು. ಜೆಡಿಎಸ್ ಟಿಕೆಟ್ ಪಡೆಯಲು ಹರಸಾಹಸಪಟ್ಟು ಹೆಚ್​.ಡಿ ಕುಮಾರಸ್ವಾಮಿ ಅವರಿಗೆ ಇನ್ನಿಲ್ಲದ ವಿಷಯವನ್ನು ಹೇಳಿಕೊಟ್ಟು ನಮಗೆ ಸತಾಯಿಸಿದ್ದರು. ಇಂದು ಅವರು ಆ ನೋವನ್ನು ಅನುಭವಿಸುತ್ತಿದ್ದಾರೆ ಎಂದು ಗೌರಿ ಶಂಕರ್​ ಹೇಳಿದ್ರು.

ಇನ್ನು, ಚೆಲುವರಾಯಸ್ವಾಮಿಗೆ ಕಾಂಗ್ರೆಸ್ ಅಥವಾ ಬಿಜೆಪಿ ವಿರುದ್ಧ ಮಾತನಾಡುವ ತಾಕತ್ತು ಇಲ್ಲ. ಹಾಗಾಗಿ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರ ಬಗ್ಗೆ ಹೇಳಿಕೆ ನೀಡುವುದನ್ನು ರೂಢಿಸಿಕೊಂಡಿದ್ದಾರೆ ಎಂದರು.

ಜೆಡಿಎಸ್ ಹಾಗೂ ಕಾಂಗ್ರೆಸ್​ನ ಶಾಸಕರು, ಪಕ್ಷ ಬಿಟ್ಟು ಹೋಗಿರುವಂತಹ 17 ಮಂದಿ ಶಾಸಕರ ಸ್ಥಿತಿ ಏನಾಗಿದೆ ಎಂಬುದನ್ನು ಗಮನಿಸಿ ಆನಂತರ ಹೆಜ್ಜೆ ಇಡುವಂತೆ ತಿಳಿಸಿದರು. ಬಿಜೆಪಿಯವರು ಈಗಾಗಲೇ ರಾಜ್ಯದಲ್ಲಿ ದ್ವೇಷ ರಾಜಕಾರಣ ಆರಂಭಿಸಿದ್ದಾರೆ. ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದರು. ಆದರೆ ಹೆಚ್​ಡಿಕೆ ಅಧಿಕಾರದಲ್ಲಿದ್ದಾಗ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರಕ್ಕೆ ಬಿಡುಗಡೆ ಮಾಡಿದ್ದ ವಿಶೇಷ ಅನುದಾನವನ್ನು ತಡೆಹಿಡಿಯಲಾಗಿದೆ. ದಯವಿಟ್ಟು ದ್ವೇಷದ ರಾಜಕಾರಣ ಮಾಡಬೇಡಿ ಎಂದು ಸಿಎಂಗೆ ಶಾಸಕ ಗೌರಿ ಶಂಕರ್​ ಮನವಿ ಮಾಡಿದರು.

ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹದಿಂದ ಸಾವು-ನೋವು ಸಂಭವಿಸಿದ ಹಿನ್ನೆಲೆಯಲ್ಲಿ ಸರಳವಾಗಿ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಳ್ಳುತ್ತಿರುವುದಾಗಿ ತಿಳಿಸಿದ್ರು.

Intro:ಚೆಲುವರಾಯಸ್ವಾಮಿಗೆ ಮಾಡಲು ಕೆಲಸವಿಲ್ಲ ಹೀಗಾಗಿ ಎಚ್ಡಿಕೆ ವಿರುದ್ಧ ಹೇಳಿಕೆ...... ಶಾಸಕ ಗೌರಿಶಂಕರ್ ಆರೋಪ.....

ತುಮಕೂರು
ಮಾಜಿ ಶಾಸಕ ಚೆಲುವರಾಯಸ್ವಾಮಿ ಅವರಿಗೆ ಮಾಡಲು ಕೆಲಸವಿಲ್ಲ ಅದಕ್ಕೆ ಅವಕಾಶ ಸಿಕ್ಕಾಗಲೆಲ್ಲ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಹೇಳಿಕೆ ನೀಡುವ ಮೂಲಕ ಚಟ ತೀರಿಸಿ ಕೊಳ್ಳುತ್ತಿದ್ದಾರೆ ಎಂದು ತುಮಕೂರು ಗ್ರಾಮಾಂತರ ಶಾಸಕ ಡಿಸಿ ಗೌರಿಶಂಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮ್ಮ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಬಂದು ಸ್ವಾಮಿಜಿಯವರ ಆಶೀರ್ವಾದ ಪಡೆದ ನಂತರ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಚೆನ್ನಿಗಪ್ಪ ಹಾಗೂ ನಾನು ಸೋಲು ಕಾಣಲು ಚೆಲುವರಾಯಸ್ವಾಮಿ ಅವರೇ ಕಾರಣ. ಜೆಡಿಎಸ್ ಟಿಕೆಟ್ ಪಡೆಯಲು ಹರಸಾಹಸಪಟ್ಟು ಒಂದು ಎಚ್ ಡಿ ಕುಮಾರಸ್ವಾಮಿ ಅವರಿಗೆ ಇನ್ನಿಲ್ಲದ ವಿಷಯವನ್ನು ಹೇಳಿಕೊಟ್ಟು ನಮಗೆ ಸತಾಯಿಸಿದ್ದರು. ಇಂದು ಅವರು ಆ ನೋವನ್ನು ಅನುಭವಿಸುತ್ತಿದ್ದಾರೆ ಎಂದು ಹೇಳಿದರು.
2013ರಲ್ಲಿ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ನಾನು ಸೋಲಲು ಚೆಲುವರಾಯಸ್ವಾಮಿ ಅವರ ಹಸ್ತಕ್ಷೇಪವೇ ಕಾರಣ ಎಂದು ಹೇಳಿದರು. ಚೆಲುವರಾಯಸ್ವಾಮಿಗೆ ಕಾಂಗ್ರೆಸ್ ವಿರುದ್ಧ ವಾಗಲಿ ಮತ್ತು ಬಿಜೆಪಿ ವಿರುದ್ಧ ವಾಗಲಿ ಮಾತನಾಡುವ ತಾಕತ್ತು ಇಲ್ಲದಾಗಿದೆ ಹಾಗಾಗಿ ಎಚ್ ಡಿ ಕುಮಾರಸ್ವಾಮಿ ಅವರ ಬಗ್ಗೆ ಹೇಳಿಕೆ ನೀಡುವುದನ್ನು ರೂಡಿಸಿಕೊಂಡಿದ್ದಾರೆ ಎಂದರು.
ಜೆಡಿಎಸ್ ಹಾಗೂ ಕಾಂಗ್ರೆಸ್ ನ ಶಾಸಕರು, ಪಕ್ಷ ಬಿಟ್ಟು ಹೋಗಿರುವ ಅಂತಹ 17 ಮಂದಿ ಶಾಸಕರ ಸ್ಥಿತಿ ಏನಾಗಿದೆ ಎಂಬುದನ್ನು ಗಮನಿಸಿ ಆನಂತರ ಹೆಜ್ಜೆ ಇಡುವಂತೆ ತಿಳಿಸಿದರು.
ಬಿಜೆಪಿಯವರು ಈಗಾಗಲೇ ರಾಜ್ಯದಲ್ಲಿ ದ್ವೇಷ ರಾಜಕಾರಣ ಆರಂಭಿಸಿದ್ದಾರೆ, ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಮುಖ್ಯಮಂತ್ರಿಗಳು ಈಗಾಗಲೇ ಹೇಳಿದ್ದರು. ಆದರೆ ಎಚ್ ಡಿ ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರಕ್ಕೆ ಬಿಡುಗಡೆ ಮಾಡಿದ್ದ ವಿಶೇಷ ಅನುದಾನ ತಡೆಹಿಡಿಯಲಾಗಿದೆ. ದಯವಿಟ್ಟು ದ್ವೇಷದ ರಾಜಕಾರಣ ಮಾಡಬೇಡಿ ಎಂದು ಹೇಳಿದರು.
ಉತ್ತರ ಕರ್ನಾಟಕದ ಭಾಗದಲ್ಲಿ ಹಿನ್ನೆಲೆ ಹಿನ್ನೆಲೆಯಲ್ಲಿ ಸರಳವಾಗಿ ಹುಟ್ಟುಹಬ್ಬವನ್ನು ಸರಳವಾಗಿ ಆಚರಣೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದರು.

Body:ತುಮಕೂರು

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.