ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕು ವ್ಯಾಪ್ತಿಯಲ್ಲಿ ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಐಸಿಯು ಬೆಡ್ ಹಾಗೂ ಆಕ್ಸಿಜನ್ ಬೆಡ್ಗಳ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಶಾಸಕ ರಂಗನಾಥ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಕುಣಿಗಲ್ನಲ್ಲಿ ಮೌನ ಪ್ರತಿಭಟನೆ ನಡೆಸಿದ ಶಾಸಕ ರಂಗನಾಥ ಹಾಗೂ ಬೆಂಬಲಿಗರು, ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಪ್ರತಿಭಟನೆಯಲ್ಲಿ ಪಾಲ್ಗೊಂಡು, ಆಕ್ಸಿಜನ್ ಕೊರತೆಯಿಂದ ಬಳಲುತ್ತಿರುವ ರೋಗಿಗಳು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕೂಡ ಹೋಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಬಡ ರೋಗಿಗಳು ಪ್ರಾಣ ಬಿಡುತ್ತಿದ್ದಾರೆ. ತಕ್ಷಣ ಸರ್ಕಾರ ಇತ್ತ ಗಮನ ಹರಿಸಬೇಕು ಎಂದು ಆಗ್ರಹಿಸಿದರು.
ಗ್ರಾಮೀಣ ಭಾಗದ ಶಾಸಕರನ್ನು ಕರೆದು ಮುಖ್ಯಮಂತ್ರಿಗಳು ಸಭೆ ನಡೆಸಿ ಸಮಸ್ಯೆ ಬಗೆಹರಿಸುವತ್ತ ಚಿಂತನೆ ನಡೆಸಬೇಕಿದೆ. ಮುಖ್ಯಮಂತ್ರಿಗಳು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿಗೂ ಅಧಿಕಾರವಿಲ್ಲದೆ ಶಕ್ತಿ ಕುಂದಿದೆ. ಕುಣಿಗಲ್ಗೆ ಅವರು ಬಂದಾಗ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡುತ್ತೇವೆ. ಅವರು ವೈಯಕ್ತಿಕವಾಗಿ ಒಳ್ಳೆಯ ವ್ಯಕ್ತಿಯಾಗಿದ್ದರೂ, ಅವರಿಗೆ ಅಧಿಕಾರದ ವ್ಯಾಪ್ತಿಯನ್ನು ಕಡಿತಗೊಳಿಸಲಾಗಿದೆ ಎಂದರು.
ಓದಿ: ಸಿಎಂ ತವರು ಜಿಲ್ಲೆಯಲ್ಲೇ ಆಕ್ಸಿಜನ್, ಬೆಡ್ಗಳ ಕೊರತೆ: ಕೇಳೋರ್ಯಾರು ರೋಗಿಗಳ ಗೋಳು?