ತುಮಕೂರು: ಕಡಬ ಗ್ರಾಮದಿಂದ ಬೆಂಗಳೂರಿಗೆ ಹೊಸ ಬಸ್ ಸಂಚರಿಸಲಿದ್ದು ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಬಸ್ ಚಾಲನೆ ಮಾಡುವ ಮೂಲಕ ಚಾಲನೆ ನೀಡಿದರು.
ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ಬಸ್ ನಿಲ್ದಾಣದ ಒಳಭಾಗದಲ್ಲಿ ಶಾಸಕರು ಬಸ್ ಚಲಾಯಿಸಿದರು. ಗ್ರಾಮೀಣ ಪ್ರದೇಶದಿಂದ ಸಾಕಷ್ಟು ಮಂದಿ ನಗರ ಪ್ರದೇಶಗಳಿಗೆ ದಿನನಿತ್ಯ ಓಡಾಡುತ್ತಿದ್ದು, ಬಸ್ ಸೌಲಭ್ಯದ ಅಗತ್ಯವಿತ್ತು. ಈ ಹಿನ್ನೆಲೆಯಲ್ಲಿ ಪ್ರತಿದಿನ ಬೆಳಗ್ಗೆ 7.30ಕ್ಕೆ ಕಡಬದಿಂದ ಬೆಂಗಳೂರಿಗೆ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ.