ತುಮಕೂರು : ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಶಾಸಕ ಶ್ರೀನಿವಾಸ್ ಅನೇಕ ದಿನಗಳಿಂದ ಪಕ್ಷ ಚಟುವಟಿಕೆಗಳು ಹಾಗೂ ಮುಖಂಡರ ಕುರಿತು ಆಡಿದ ಕೆಲ ಅಸಮಾಧಾನದ ಮಾತುಗಳು ಸಾಕಷ್ಟು ಚರ್ಚೆಗೆ ಒಳಗಾಗಿದ್ದವು. ಇದೀಗ ಪಕ್ಷ ನಡೆಸುತ್ತಿರುವ ಸಮಾವೇಶದ ಬಗ್ಗೆ ಮಾಹಿತಿ ಇಲ್ಲ ಎಂದು ಜೆಡಿಎಸ್ ಶಾಸಕ ಶ್ರೀನಿವಾಸ್ ಹೇಳಿದ್ದಾರೆ.
ಅನೇಕ ಬಾರಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನನಗೆ ಪರ್ಯಾಯವಾಗಿ ಮತ್ತೊಬ್ಬ ನಾಯಕನನ್ನು ಗುಬ್ಬಿ ವಿಧಾನ ಸಭಾ ಕ್ಷೇತ್ರದಲ್ಲಿ ಪರಿಚಯಿಸುತ್ತಿದ್ದಾರೆ ಎಂದು ಜೆಡಿಎಸ್ ಶಾಸಕ ಶ್ರೀನಿವಾಸ್ ಅಸಮಾಧಾನ ಹೊರ ಹಾಕಿದ್ದರು.
ಇದೀಗ ಅದಕ್ಕೆ ಪೂರಕವೆಂಬಂತೆ ಜೆಡಿಎಸ್ ಅ.22ರಂದು ಗುಬ್ಬಿಯ ಸುಭಾಷ್‌ನಗರದ ಪ್ರಾಥಮಿಕ ಶಾಲಾ ಆವರಣದಲ್ಲಿ ಸಮಾವೇಶ ಹಮ್ಮಿಕೊಂಡಿದ್ದಾರೆ. ಜೆಡಿಎಸ್ ಯುವನಾಯಕ ನಾಗರಾಜ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎನ್ನಲಾಗುತ್ತಿದೆ.
ಈ ಕುರಿತಂತೆ ಶಾಸಕ ಶ್ರೀನಿವಾಸ್ ಅವರು ಮಾತನಾಡಿ, ನಾನು ಕಳೆದ 15 ದಿನಗಳಿಂದ ಧರ್ಮಸ್ಥಳದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದೆ. ನಿನ್ನೆ ಊರಿಗೆ ಬಂದಿದ್ದೇನೆ. ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದ ಬಗ್ಗೆ ಜಿಲ್ಲಾಧ್ಯಕ್ಷರಾಗಿ, ರಾಜ್ಯಾಧ್ಯಕ್ಷರಾಗಲಿ ಅಥವಾ ರಾಷ್ಟ್ರಾಧ್ಯಕ್ಷರಾಗಲಿ ಮಾಹಿತಿ ನೀಡಿಲ್ಲ ಎಂದರು.
ಇದನ್ನೂ ಓದಿ: ಪಡಿತರ ನೀಡುವ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ನೊಂದ ಮಹಿಳೆ ಮನೆಗೆ ಸಚಿವ ಸುಧಾಕರ್ ಭೇಟಿ