ತುಮಕೂರು: ತಾಯಿ ಮತ್ತು ಮೂರು ವರ್ಷದ ಮಗುವನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಮಾವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಾವ್ಯ ಹಾಗೂ ಜೀವನ್ ಕೊಲೆಯಾದವರು. ಮನೆಯಲ್ಲೇ ಇಬ್ಬರ ಶವ ಪತ್ತೆಯಾಗಿವೆ. ಕಾವ್ಯರನ್ನು ಗಂಡನೇ ಕೊಲೆ ಮಾಡಿದ್ದಾನೆ ಎಂಬ ಅನುಮಾನ ವ್ಯಕ್ತವಾಗಿದೆ. ಕೊಲೆ ಬಳಿಕ ಆಕೆಯ ಗಂಡ ನಾಪತ್ತೆಯಾಗಿದ್ದು, ಸಾಕಷ್ಟು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.
ಇದನ್ನೂ ಓದಿ: ಹಾವೇರಿ ಬಳಿ ನಿಧಿ ಆಸೆ ತೋರಿಸಿದ್ದ ವ್ಯಕ್ತಿಯ ಕೊಲೆ: ಆರೋಪಿಗಳಿಗೆ ನ್ಯಾಯಾಂಗ ಬಂಧನ
ಕೌಟುಂಬಿಕ ಕಲಹದ ಹಿನ್ನೆಲೆ ಕೊಲೆ ನಡೆದಿರಬಹುದು ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಲಭ್ಯವಾಗಿದೆ. ಸ್ಥಳಕ್ಕೆ ಸಿಪಿಐ ನದಾಫ್ ಹಾಗೂ ಚೇಳೂರು ಪೊಲೀಸರು ಭೇಟಿ ನೀಡಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಈ ಕುರಿತು ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.