ತುಮಕೂರು : ಬೆಂಗಳೂರಿಂದ ಗೋವಾ ಕಡೆಗೆ ತೆರಳುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಕ್ಷಣಾರ್ಧದಲ್ಲಿ ಸುಟ್ಟು ಭಸ್ಮವಾದ ಘಟನೆ ಜಿಲ್ಲೆಯ ಶಿರಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೊದಲು ಕಾರಿನಲ್ಲಿ ಸ್ವಲ್ಪ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರಲ್ಲಿದ್ದ ಮೂವರು ಪ್ರಯಾಣಿಕರು ತಕ್ಷಣಕ್ಕೆ ಕಾರಿನಿಂದ ಇಳಿದು ಓಡಿ ಹೋಗಿದ್ದಾರೆ.
ಸ್ಥಳದಲ್ಲಿದ್ದವರು ಬೆಂಕಿ ನಂದಿಸಲು ಸಾಕಷ್ಟು ಪ್ರಯತ್ನಪಟ್ಟರಾದರು, ಅದು ಸಾಧ್ಯವಾಗದೆ ಕಾರು ಸುಟ್ಟು ಕರಕಲಾಗಿದೆ. ಈ ಕುರಿತು ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.