ತುಮಕೂರು: ತುಮಕೂರು ನಗರ ವ್ಯಾಪ್ತಿಯಲ್ಲಿನ ಕುಡಿಯುವ ನೀರು ಸರಬರಾಜು ವ್ಯವಸ್ಥೆ ಕಾಮಗಾರಿಯಲ್ಲಿ ಬಾರಿ ಲೋಪ ಕಂಡು ಬಂದಿದೆ ಎಂದು ಸಂಸದ ಜಿ.ಎಸ್.ಬಸವರಾಜ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಳಚೆ ನೀರು ಹಾಗು ಕುಡಿಯುವ ಸೇರಿ ಹೋಗುವ ರೀತಿಯಲ್ಲಿ ಕಾಮಗಾರಿಗಳನ್ನು ಮಾಡಲಾಗಿದೆ. ಈ ಕೊಳಚೆ ನೀರು ಕುಡಿದು ಸಾರ್ವಜನಿಕರು ಜಾಂಡೀಸ್ ಕಾಯಿಲೆಗೆ ತುತ್ತಾಗುವ ಆತಂಕವಿದೆ ಎದುರಾಗಿದೆ. ಕುಡಿಯುವ ನೀರು ಸರಬರಾಜು ವ್ಯವಸ್ಥೆ ಕಾಮಗಾರಿಯಯನ್ನು ಎಲ್ ಅಂಡ್ ಟಿ ಹೆಸರಿನ ಕಂಪನಿಗೆ ಗುತ್ತಿಗೆ ನೀಡಲಾಗಿದೆ. ಈ ಕಂಪನಿಯ ಕೆಲವರು ತುಂಡು ಗುತ್ತಿಗೆ ನೀಡಿ, ಅವೈಜ್ಞಾನಿಕವಾಗಿ ಕಾಮಗಾರಿ ಮಾಡಿದ್ದಾರೆ. ಹೀಗಾಗಿ, ಕಾನ್ಪುರ ಮತ್ತು ಮಧ್ಯಪ್ರದೇಶದಲ್ಲಿ ಅನುಷ್ಠಾನಗೊಂಡಿರುವ ಕಾಮಗಾರಿ ರೀತಿಯಲ್ಲಿ ಪಾಲನೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ ಎಂದರು.
ಓದಿ: ಕೊಡಗಿನಲ್ಲಿ ಮುಂದುವರಿದ ವ್ಯಾಘ್ರನ ಅಟ್ಟಹಾಸ: ಮತ್ತೊಂದು ಹಸು ಬಲಿ
ಇನ್ನು, ಕಾಮಗಾರಿಗಳ ಟೆಂಡರ್ ಪಡೆದು ಸರಿಯಾಗಿ ನಿರ್ವಹಿಸದ ಹಿನ್ನೆಲೆಯಲ್ಲಿ ಎಲ್ ಅಂಡ್ ಟಿ ಕಂಪನಿಯವರನ್ನು ಬ್ಲಾಕ್ ಲಿಸ್ಟ್ಗೆ ಸೇರಿಸಲು ಮಹಾನಗರ ಪಾಲಿಕೆಯಲ್ಲಿ ನಿರ್ಧರಿಸಲಾಗುವುದು ಎಂದರು.