ತುಮಕೂರು : ಅಪರಿಚಿತ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಹುಲಿಯೂರು ದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವ್ಯಕ್ತಿಯನ್ನು ಕೊಲೆ ಮಾಡಿ, ಬಳಿಕ ಶವವನ್ನು ಕುಣಿಗಲ್ ತಾಲೂಕಿನ ದೀಪಾಬಂದಿ ಕೆರೆಗೆ ಎಸೆದು ಹೋಗಿದ್ದಾರೆ. ಸುಮಾರು 60 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿ ಎಂದು ಪೊಲೀಸರು ಪ್ರಾಥಮಿಕ ತನಿಖೆಯಿಂದ ಪತ್ತೆ ಮಾಡಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಮೃತಪಟ್ಟ ವ್ಯಕ್ತಿಯ ಎಡಗೈ ಮೇಲೆ ಅಂಜನಮ್ಮ ಎಂದು ಹಚ್ಚೆಯನ್ನು ಬರೆಯಲಾಗಿದೆ. ಈ ಸಂಬಂಧ ಹುಲಿಯೂರು ದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ತೆಲಂಗಾಣದ ಟೆಕ್ಕಿ ಕುಟುಂಬದ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..ಪೊಲೀಸರಿಗಂತೂ ದೊಡ್ಡ ತಲೆಬಿಸಿ!